6:25 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

Kuppepadavu | ಹಕ್ಕುಪತ್ರ ಪಡೆದವರಿಗೆ ನಿವೇಶನ ನೀಡದೆ ವಂಚನೆ: ಗುರುಪುರ ನಾಡ ಕಚೇರಿ ಮುಂಭಾಗ ಸಂತ್ರಸ್ತರ ಪ್ರತಿಭಟನೆ

19/04/2025, 21:06

ಮಂಗಳೂರು(reporterkarnataka.com): ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕು
ಪತ್ರ ಪಡೆದ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ 7 ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ ಸಂತ್ರಸ್ತರು ಗುರುಪುರ ನಾಡ ಕಚೇರಿ ಮುಂಭಾಗ “ನಿವೇಶನ ರಹಿತರ ಹೋರಾಟ ಸಮಿತಿ, ಕುಪ್ಪೆಪದವು” ಇದರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
2018ರಲ್ಲಿ ಶಾಸಕ ಡಾ. ಭರತ್ ಶೆಟ್ಡಿ ನೇತೃತ್ವದಲ್ಲಿ ತರಾತುರಿಯುಲ್ಲಿ 97 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ನಿವೇಶನಗಳನ್ನು ಗುರುತು ಮಾಡಲಾಗಿತ್ತು. ಆ ತರುವಾಯ ನಿವೇಶನ ಸ್ವಾಧೀನ ನೀಡದೆ ಬಡ ನಿವೇಶನ ರಹಿತರನ್ನು ಸತಾಯಿಸಲಾಗುತ್ತಿತ್ತು. ಕಳೆದ ಜನವರಿಯಲ್ಲಿ ಸಂತ್ರಸ್ತರು ಹೋರಾಟ ಸಮಿತಿ ರಚಿಸಿಕೊಂಡು ಜಮೀನು ಸ್ವಾಧೀನ ನೀಡುವಂತೆ ಹೋರಾಟ ಆರಂಭಿಸಿದ್ದರು. ಈ ಕುರಿತು ಜನವರಿಯಲ್ಲಿ ಕುಪ್ಪೆಪದವು ಪಂಚಾಯತ್ ಮುಂಭಾಗ ನಡೆದ ಧರಣಿಯಲ್ಲಿ ಮನವಿ ಸ್ವೀಕರಿಸಲು ಆಗಮಿಸಿದ ಡೆಪ್ಯುಟಿ ತಹಶೀಲ್ದಾರ್, ಫೆಬ್ರವರಿ ಕೊನೆಯಲ್ಲಿ ನಿವೇಶನ ಸ್ವಾಧೀನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ತಾಲೂಕು ಆಡಳಿತ ಮಾತು ತಪ್ಪಿದ್ದರಿಂದ ಇಂದು ಗುರುಪುರ ನಾಡ ಕಚೇರಿ ಮುಂಭಾಗ ಪ್ರತಿಭಟನಾ ಪ್ರದರ್ಶನ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ್ “ನಿವೇಶನ ಸ್ವಾಧೀನ ನೀಡಲು ತಾಂತ್ರಿಕ ಸಮಸ್ಯೆಗಳು ಇವೆ” ಎಂದು ಹೇಳಿದ್ದು ಸಂತ್ರಸ್ತರನ್ನು ಸಿಟ್ಟಿಗೆಬ್ಬಿಸಿತು. ಈ ಕುರಿತು ಸ್ಥಳದಲ್ಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಗ್ರಾಮಪಂಚಾಯತ್ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸುವ, ಗುರುತಿಸಿರುವ ಜಮೀನನ್ನು ನೇರ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುವ ಎಚ್ಚರಿಕೆ ನೀಡಿದರು. ಬಡ ನಿವೇಶನ ರಹಿತರನ್ನು ಕಡೆಗಣಿಸಿರುವ ಶಾಸಕ ಡಾ. ಭರತ್ ಶೆಟ್ಟಿ, ಈ ಕುರಿತು ಧ್ವನಿ ಎತ್ತದ ಕಾಂಗ್ರೆಸ್ ಮುಖಂಡ ಇನಾಯತ್ ಅಲಿಯ ನಡೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನಾ ಪ್ರದರ್ಶನವನ್ನು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಉದ್ಘಾಟಿಸಿದರು. ಕಾರ್ಮಿಕ ಮುಂದಾಳುಗಳಾದ ಸದಾಶಿವ ದಾಸ್, ನೋಣಯ್ಯ ಗೌಡ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಿವೇಶನ ರಹಿತರ ಹೋರಾಟ ಸಮಿತಿಯ ಸಂಚಾಲಕಿ ವಸಂತಿ ಕುಪ್ಪೆಪದವು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ವಲಯ ಅಧ್ಯಕ್ಷ ಬಾಬು ಸಾಲ್ಯಾನ್, ಗುರುಪುರ ವಲಯ ಬೀಡಿ ಕಾರ್ಮಿಕರ ಸಂಘದ ಮುಖಂಡರಾದ ಹೊನ್ನಯ್ಯ ಅಮೀನ್, ವಾರಿಜ ಕುಪ್ಪೆಪದವು, ಹೋರಾಟ ಸಮಿತಿಯ ಸದಾಶಿವ ಕಟ್ಟೆಮಾರ್, ಜಮೀಲಾ ಮಾಣಿಪಳ್ಳ, ಮಜೀದ್ ಕಲ್ಲಾಡಿ, ಕುಸುಮಾ ಕುಪ್ಪೆಪದವು, ರಜಿಯಾ ಮಾಣಿಪಳ್ಳ, ಬಾಲಕೃಷ್ಣ ಶೆಟ್ಟಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು