5:44 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ

16/01/2025, 19:00

ಬೆಂಗಳೂರು(reporterkarnataka.com): ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್‌-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ. ಎರಡೂವರೆ ವರ್ಷಕ್ಕೆ ಅಧಿಕಾರ ಹಸ್ತಾಂತರವಾಗಬೇಕೆಂದು ಒಪ್ಪಂದವಾದರೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಲು ಮನಸ್ಸಿಲ್ಲ. ಅದಕ್ಕಾಗಿ ಸಚಿವರನ್ನು ಛೂ ಬಿಟ್ಟಿದ್ದು, ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿದ್ದಾರೆ. ಅದಕ್ಕಾಗಿ ಅವರೀಗ ಹೈಕಮಾಂಡ್‌ ಪಾದದ ಬಳಿ ಕೂತಿದ್ದಾರೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಸಿದ್ಧವಿಲ್ಲ. ಇವೆಲ್ಲದರಿಂದಾಗಿ ಯಾರೂ ಜನರ ಪರವಾಗಿ ಮಾತಾಡುತ್ತಿಲ್ಲ. ಗುತ್ತಿಗೆದಾರರು ದಯಾಮರಣಕ್ಕೆ ಕೋರಿದ್ದರೆ, ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಎಲ್ಲರೂ ಕುರ್ಚಿಗಾಗಿ ಕಾದಾಡುತ್ತಿದ್ದಾರೆ. ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಇಂತಹ ಬಣ ಬಡಿದಾಟ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹೀನಾಯವಾಗಲಿದೆ ಎಂದರು.
*ಮತ್ತೊಂದು ಸ್ವಾತಂತ್ರ್ಯ ಹೋರಾಟ:* ಆರ್‌ಎಸ್‌ಎಸ್‌ ಸರಸಂಘಚಾಲಕರಾದ ಮೋಹನ್‌ ಭಾಗವತ್‌ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಟೀಕೆ ಮಾಡುತ್ತಿದ್ದಾರೆ. ರಾಮ ಮಂದಿರ ನಿರ್ಮಾಣದ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಮಂದಿರ ನಿರ್ಮಾಣ ಎಂದರೆ ಮತ್ತೊಂದು ಸ್ವಾತಂತ್ರ್ಯ ಹೋರಾಟ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಯಾವ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ? ಇಂದಿರಾ ಗಾಂಧಿ ತಂದ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟವೇ ಒಂದು ಸ್ವಾತಂತ್ರ್ಯ ಸಂಗ್ರಾಮ. ಆ ಸಂಗ್ರಾಮದಲ್ಲಿ ಜನಸಂಘದ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್‌ನವರು ಯಾವ ಹೋರಾಟ ಮಾಡಿದ್ದಾರೆ ಎಂದು ತಿಳಿಸಲಿ. ಇಂದಿರಾಗಾಂಧಿಯನ್ನೇ ವಿರೋಧಿಸಿ ಹೋರಾಟ ಮಾಡಿದ ಆರ್‌ಎಸ್‌ಎಸ್‌, ರಾಹುಲ್‌ ಗಾಂಧಿಗೆ ಹೆದರುವುದಿಲ್ಲ ಎಂದರು.
ಕೇಂದ್ರ ಸರ್ಕಾರ ಜನಗಣತಿ ನಡೆಸುತ್ತಿರುವಾಗ ಕಾಂಗ್ರೆಸ್‌ ಸರ್ಕಾರ ಜಾತಿ ಗಣತಿ ವರದಿಯ ಬಗ್ಗೆ ಮಾತಾಡುತ್ತಿದೆ. ಜಾತಿ ಗಣತಿ ವರದಿಯನ್ನು ಬೀದಿಬೀದಿಯಲ್ಲಿ ಜನರು ನೋಡಿದ್ದಾರೆ. ಅದು ಈಗಾಗಲೇ ಬಹಿರಂಗವಾಗಿದೆ. ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿರುವ ವರದಿ ಇದಾಗಿದ್ದು, ಯಾವುದೇ ರಹಸ್ಯ ಉಳಿದಿಲ್ಲ. ಎಲ್ಲರೂ ಒಪ್ಪುವಂತೆ ಜಾತಿ ಗಣತಿ ವರದಿ ತಯಾರಿಸಬೇಕು. ಒಕ್ಕಲಿಗರು ಹಾಗೂ ಲಿಂಗಾಯತರ ಸಂಖ್ಯೆ ಜಾಸ್ತಿ ಬರಬಾರದೆಂಬ ಕಾರಣಕ್ಕೆ ಒಡೆದು ಚೂರು ಮಾಡಲಾಗಿದೆ ಎಂದು ದೂರಿದರು.
ಎಲ್ಲ ಯೋಜನೆಗಳಿಗೆ ಕೇಂದ್ರ ಸರ್ಕಾರದ ಜನಗಣತಿ ವರದಿಯನ್ನು ಮಾನದಂಡವಾಗಿ ಪರಿಗಣಿಸಲಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ನಡೆಸುವ ಜನಗಣತಿ ವರದಿಯಲ್ಲೇ ಎಲ್ಲ ಜಾತಿಗಳ ಲೆಕ್ಕಾಚಾರ ಕೂಡ ಬರುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಈ ಗಣತಿಗೆ ಸಹಕಾರ ನೀಡಬೇಕು. ಅದು ಬಿಟ್ಟು ಪ್ರತ್ಯೇಕವಾಗಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿ ರಾಜಕೀಯ ಮಾಡಬಾರದು. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಡಬಲ್‌ ಗೇಮ್‌ ಆಡುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು