ಇತ್ತೀಚಿನ ಸುದ್ದಿ
ಕುಶಾಲನಗರ| ಆನೆಕಾಡು ಬಳಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
02/08/2025, 19:51

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕುಶಾಲನಗರ ಹೊರವಲಯದ ಆನೆಕಾಡು ಬಳಿ ಸಂಭವಿಸಿದ ಬೈಕ್ ಮತ್ತು ಕಾರು ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಾಪಟ್ಟಿದ್ದಾರೆ.
ಮೃತನನ್ನು ಪೆರಾಜೆಯ ಕಾತಿ೯ಕ್ ಭಟ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿದ್ದು,ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಕೊನೆಯುಸಿರಿಲೆಳೆದಿದ್ದಾನೆ, ಡಿಕ್ಕಿ ಹೊಡೆದ ಬಳಿಕ ಕಾರು ರಸ್ತೆ ಬದಿಯ ಚರಂಡಿಗೆ ಎಗರಿ ಕಾಡಿನೊಳಗೆ ನುಗ್ಗಿದೆ, ಘಟನಾ ಸ್ಥಳಕ್ಕೆ ಕುಶಾಲನಗರ ಸಂಚಾರಿ ಪೊಲೀಸರು ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.