2:15 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕುಶಾಲನಗರ: ಲಂಚ ಸ್ವೀಕರಿಸುತ್ತಿದ್ದ ವೇಳೆ ನೀರಾವರಿ ನಿಗಮ ಲೆಕ್ಕ ಸಹಾಯಕ ಲೋಕಾಯುಕ್ತ ಬಲೆಗೆ

11/09/2025, 22:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರದಲ್ಲಿರುವ ಕಾವೇರಿ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ ಕಚೇರಿಯ ಕಾರ್ಯಪಾಲಕ ಅಭಿಯಂತರ ಹಾಗೂ ಕಚೇರಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಲಂಚ ಸ್ವೀಕಾರ ಸಂದರ್ಭ ಲೋಕಾಯುಕ್ತ ದಾಳಿ‌ ನಡೆಸಿದ ಘಟನೆ ನಡೆದಿದೆ.
ವಿದ್ಯುತ್ ಗುತ್ತಿಗೆದಾರ ಪ್ರಸನ್ನ ಎಂಬಾತನಿಂದ ಒಂದೂವರೆ ಲಕ್ಷದ ಕಾಮಗಾರಿಯ ಬಿಲ್ ಮಾಡಲು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುಣಸೂರಿನ ಆರ್.ಕೃಷ್ಣ ಎಂಬಾತ 35 ಸಾವಿರಕ್ಕೆ‌ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಈ ಪೈಕಿ ಗುರುವಾರ 20 ಸಾವಿರ ಹಣ ಪಡೆಯುತ್ತಿದ್ದ ಸಂದರ್ಭ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ, ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಲೋಕೇಶ್, ವೀಣಾ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಮುಖ್ಯ ಪೇದೆ ಲೋಕೇಶ್ ಸೇರಿದಂತೆ ಸಿಬ್ಬಂದಿಗಳಾದ ಮಂಜುನಾಥ್, ಶಶಿ, ಲೋಹಿತ್, ಪ್ರವೀಣ್ ಕುಮಾರ್, ದೀಪಿಕಾ, ಅರುಣ್ ಕುಮಾರ್, ಸಲಾಹುದ್ದಿನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು