10:38 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಬಣಕಲ್- ದೇವರಮನೆ ರಸ್ತೆ ಸೇತುವೆ: ಹಲವು ಗ್ರಾಮಗಳ ಸಂಪರ್ಕ ಕಡಿತ ಸಾಧ್ಯತೆ

30/11/2023, 19:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ
ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಮುಖಂಡ ಬಿ.ಎಸ್. ವಿಕ್ರಂ ಮಾತನಾಡಿ, ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಬಣಕಲ್ ಗ್ರಾಮದಿಂದ ಸಂಪರ್ಕಿಸುವ ಸೇತುವೆಯ ಮಧ್ಯಭಾಗದಲ್ಲಿ ಕುಸಿತವಾಗಿದ್ದು, ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ ದೇವರ ಮನೆಯು ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ. ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ.


ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುವ ಸಾಧ್ಯತೆಗಳಿವೆ. ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ. ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು. ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು