8:53 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಕುಸಿಯುವ ಭೀತಿಯಲ್ಲಿ ಶಿಥಿಲಗೊಂಡ ಅತ್ತಿಗೆರೆ ಅಂಗನವಾಡಿ ಕೇಂದ್ರ: ಹಾವು- ಚೇಳುಗಳ ಕಾಟ

29/08/2024, 18:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಅಂಗನವಾಡಿ ಕೇಂದ್ರ ತೀರಾ ಶಿಥಿಲಾವಸ್ತೆಯಲ್ಲಿದ್ದು, ಕುಸಿಯುವ ಹಂತಕ್ಕೆ ತಲುಪಿದೆ.
ಅಂಗನವಾಡಿಯ ದುಃಸ್ಥಿತಿ ಬಗ್ಗೆ ಅನೇಕ ಬಾರಿ ಸ್ಥಳೀಯ ಆಡಳಿತದ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನ ಆಗಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.



ಅಂಗನವಾಡಿ ಶಿಥಿಲ ಆಗಿರುವುದರಿಂದ ಇಲ್ಲಿಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ.
ಸುತ್ತಮುತ್ತ ಪೊದೆಗಳು ಇರುವುದರಿಂದ ಹಾವುಗಳ ಕಾಟವು ಅಧಿಕವಾಗಿದ್ದು ಕಳೆದ ಒಂದು ವಾರದಲ್ಲಿ ಮೂರು ಬಾರಿ ಇಲ್ಲಿ ಹಾವು ಪತ್ತೆಯಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಶಿಥಿಲಗೊಂಡ ಕಟ್ಟಡವನ್ನು ದುರಸ್ತಿಪಡಿಸುವ ಬದಲಾಗಿ , ಹೊಸದಾಗಿ ಕಟ್ಟಡವನ್ನು ನಿರ್ಮಿಸಬೇಕು ಅಲ್ಲಿಯವರೆಗೆ , ತಾತ್ಕಾಲಿಕವಾಗಿ ಅಂಗನವಾಡಿ ಕೇಂದ್ರವನ್ನು ಸೂಕ್ತ ಸ್ಥಳಕ್ಕೆ ವರ್ಗಾಯಿಸಬೇಕು ಎನ್ನುವ ಅಭಿಪ್ರಾಯ ಹಲವರದು.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಈ ನಿಟ್ಟಿನಲ್ಲಿ ಗಮನ ಹರಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು