3:10 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕುತ್ಲೂರು ಸರಕಾರಿ ಶಾಲೆ ಮಕ್ಕಳಿಂದ ಜಿಲ್ಲಾಧಿಕಾರಿ ಭೇಟಿ: ಡಿಸಿಗೆ ತಾವೇ ಬೆಳೆಸಿದ ತರಕಾರಿ ಕೊಡುಗೆ ನೀಡಿದ ಪುಟಾಣಿಗಳು!

16/04/2025, 23:37

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ತಾವು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ ಮಕ್ಕಳು ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು.

ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಎ. ಎನ್., ಹಳೆ ವಿದ್ಯಾರ್ಥಿ ಸಂಘದ ಶಿವರಾಜ್ ಹಾಗೂ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರನ್ನು ಭೇಟಿ ಮಾಡಿ ಅವರಿಗೂ ವಿದ್ಯಾರ್ಥಿಗಳು ತರಕಾರಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು