10:49 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024′ ಕ್ರಿಕೆಟ್ ಪಂದ್ಯಾಟ: ಬೆಂಗಳೂರು ನಗರ ಪ್ರಥಮ, ಹಾಸನ ದ್ವಿತೀಯ

07/01/2024, 22:44

ಮಂಗಳೂರು( reporterkarnataka.com): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ ‌ಸ್ಮರಣೆಯೊಂದಿಗೆ ನಡೆದಿದ್ದು, ಬೆಂಗಳೂರು ನಗರ ಕಾರ್ಯ ನಿರತ ಪತ್ರಕರ್ತರ ಸಂಘ ಪ್ರಥಮ ಹಾಗೂ ಹಾಸನ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ ಹಾಗೂ ಮಂಡ್ಯ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ತೃತೀಯ ಪ್ರಶಸ್ತಿ ಗಳಿಸಿದೆ.

ಸಮಾರೋಪ ಸಮಾರಂಭದಲ್ಲಿ ವಿಧಾನ ಸಭಾ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಬೈರತಿ ಬಸವರಾಜು, ಬಿ.ರಮಾನಾಥ ರೈ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ ಶುಭ ಹಾರೈಸಿದರು.
ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಧಿಕಾರಿ ಮುಲ್ಲೈ ಮುಗಿಲನ್ , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ವೇದಿಕೆಯಲ್ಲಿ ಕಿಶೋರ್ ಆಳ್ವ, ಸುಚರಿತ ಶೆಟ್ಟಿ, ಇಫ್ತಿಕಾರ್ ಅಲಿ, ಮೂಡಾ ಕಮಿಷನರ್ ಮನ್ಸೂರ್ ಅಲಿ, ಪೊಲೀಸ್ ಅಧಿಕಾರಿ ಗೋಪಾಲ್ ಕುಂದರ್, ಲೀಲಾಕ್ಷ ಕರ್ಕೇರಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಸಮಿತಿಯ ಪದಾಧಿಕಾರಿಗಳಾದ ಮತ್ತಿಕೆರೆ ಜಯರಾಮ್, ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ವಾರ್ತಾಧಿಕಾರಿ ಖಾದರ್ ಶಾ, ಮಹಾರಾಷ್ಟ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್. ರಾಮಕೃಷ್ಣ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪದಾಧಿಕಾರಿಗಳಾದ ವಿಜಯ ಕೋಟ್ಯಾನ್, ರಾಜೇಶ್ ದಡ್ಡಂಗಡಿ, ಸಂಘಟಕರಾದ ವಿಲ್ಫೇಡ್ ಡಿ ಸೋಜ, ಆರಿಫ್ ಕೆ, ರಾಜೇಶ್ ಪೂಜಾರಿ,ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಮೊದಲಾದವರು ಉಪಸ್ಥಿತರಿದ್ದರು. ಪುಷ್ಪ ರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಜಿತೇಂದ್ರ ಕುಂದೇಶ್ವರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು