8:43 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ 2024’ ಜೆರ್ಸಿ ಬಿಡುಗಡೆ

30/12/2023, 20:49

ಮಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2024ರ ಜ.5,6 ಮತ್ತು 7ರಂದು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ ‘ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಪ್ರಯುಕ್ತ ಜೆರ್ಸಿಯನ್ನು ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಶನಿವಾರಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಇಫ್ತಿಕಾರ್ ಅಲಿ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು. ಮಂಗಳೂರು ಪ್ರವಾಸೋದ್ಯಮ, ಶೈಕ್ಷಣಿಕ, ಆರೋಗ್ಯ ಸೇರಿದಂತೆ ವಿವಿಧ ಕಾರಣಗಳಿಗೆ ಜನರ ಆಕರ್ಷಣೆಗೆ ಕಾರಣ ರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರಿಗೆ ಬರುವವರನ್ನು ಉತ್ತಮ ಆತಿಥ್ಯ ದೊಂದಿಗೆ ಉಪಚರಿಸುವುದು ನಮ್ಮ ಕರ್ತವ್ಯ. ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಗಳು ಮಾದರಿಯಾಗಿ ನಡೆಯಬೇಕು ಈ ನಿಟ್ಟಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯೂ ಮಾದರಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ರೋಹನ್ ಕಾರ್ಪೋರೇಶನ್ ನಿರ್ದೇಶಕ ಆಲಿಸ್ಟನ್ ಸಿಕ್ವೇರಾ ಮೊದಲಾದವರು ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ರಾಜ್ಯ ಕಾರ್ಯ ಕಾರಿ ಸಮಿತಿ ಜಗನ್ನಾಥ ಶೆಟ್ಟಿ ಬಾಳ, ನಾಮನಿರ್ದೇಶಿತ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ, ಅಶೋಕ್ ಶೆಟ್ಟಿ ಬಿ.ಎನ್., ಹಿರಿಯ ಪತ್ರಕರ್ತ ರವೀಂದ್ರ ಶೆಟ್ಟಿ ಉಪಸ್ಥಿತ ರಿದ್ದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪ್ರದಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್. ಕಾರ್ಯ ಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು