12:29 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ

14/12/2021, 11:14

ಬೆಂಗಳೂರು(reporterkarnataka.com): ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ(84)ಇಂದು ನಿಧನರಾದರು.

ಅಲ್ಪಕಾಲದ ಅನಾರೋಗ್ಯದಿಂದ ಅವರು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ರಾಜೇಶ್ವರಿ ತೇಜಸ್ವಿ- 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದವರು. ಹೆಣ್ಣುಮಕ್ಕಳಿಗೂ ತಮ್ಮ ಕಾಲ ಮೇಲೆ ನಿಂತುಕೊಳ್ಳುವ ವಿದ್ಯಾಭ್ಯಾಸ ಕೊಡಬೇಕೆನ್ನುವ ತಮ್ಮ ತಂದೆಯ ಉದಾತ್ತ ಧ್ಯೇಯದಿಂದಾಗಿ ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ ಮಾಡಲು ಮಾನಸ ಗಂಗೋತ್ರಿ ಮೈಸೂರಿಗೆ ಬಂದರು. ಅಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಪರಿಚಯವಾಗಿ ಪ್ರೀತಿಸಿದರು. ಆನಂತರ ಇವರ ಬದುಕಿನ ದಿಕ್ಕೇ ಬದಲಾಯಿಸಿತು. 1966ರಲ್ಲಿ  ವಿವಾಹವಾದರು. ‘ನನ್ನ ತೇಜಸ್ವಿ’ ರಾಜೇಶ್ವರಿ ಅವರ ಮೊಟ್ಟ ಮೊದಲ ಪುಸ್ತಕ. ಈಗ ಅದು ಐದನೇ ಮುದ್ರಣ ಕಂಡಿದೆ. 

ಇವರ ಹವ್ಯಾಸವೂ ವಿಭಿನ್ನವಾಗಿದೆ. ಕ್ರೋಶ-ಟೈಲರಿಂಗ್, ಮೊಮ್ಮಕ್ಕಳು ಮತ್ತು ನೆರೆಹೊರೆಯ ಮಕ್ಕಳಿಗೆ Stamp collection. ಇವತ್ತಿಗೆ E-mail ಇದ್ದರೂ ಅಪರೂಪದ Stamp collection ಮಾಡಿದ್ದಾರೆ. ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಇವರ ಎರಡನೆಯ ಪುಸ್ತಕ. ರಾಜೇಶ್ವರಿ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದು ಇಬ್ಬರೂ ಸಾಫ್ಟ್ ವೇರ್ ಇಂಜಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ರಾಜೇಶ್ವರಿ ತೇಜಸ್ವಿಯವರು ಅಪರೂಪದ ಹವ್ಯಾಸಗಳೊಂದಿಗೆ ಮೂಡಿಗೆರೆಯಲ್ಲಿ ಕಾಫಿತೋಟವನ್ನ ನೋಡಿಕೊಳುತ್ತಾ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು