11:32 AM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್, ಮಾಜಿ ಶಾಸಕ ನರಸಿಂಹಸ್ವಾಮಿ ನಿಧನಕ್ಕೆ ವಿಧಾನ ಸಭೆಯಲ್ಲಿ ಸಂತಾಪ

16/12/2024, 21:09

ಬೆಳಗಾವಿಸುವರ್ಣಸೌಧ (reporterkarnataka.com): ಭಾನುವಾರ ನಿಧನರಾದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನರಸಿಂಹಸ್ವಾಮಿ.ಜೆ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ಅವರಿಗೆ ಸೋಮವಾರ ವಿಧಾನ ಸಭೆಯ ಕಲಾಪದ ಆರಂಭದಲ್ಲಿ ಸಂತಾಪ ಸೂಚಿಸಲಾಯಿತು.
ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಮಾಜಿ ಶಾಸಕ ನರಸಿಂಹಸ್ವಾಮಿ.ಜೆ ಹಾಗೂ ತಬಲಾ ವಾದಕ ಜಾಕೀರ್ ಹುಸೇನ್ ನಿಧನದ ವಿಷಯವನ್ನು ಪ್ರಸ್ತಾಪಿಸಿ ಸಂತಾಪ ಸೂಚನೆ ನಿರ್ಣಯವನ್ನು ಮಂಡಿಸಿದರು.
ನರಸಿಂಹಸ್ವಾಮಿ ಜೆ. ಅವರು 25-05-1947 ರಂದು ಜನಿಸಿದ್ದರು. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ 2004 ಹಾಗೂ 2008ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಬೆಂಗಳೂರು ಜಿಲ್ಲಾ ಪಂಚಾಯತ್ ಸದಸ್ಯ, ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇವರು 15-12-2024 ರಂದು ನಿಧನ ಹೊಂದಿದ್ದಾರೆ.
ಅಂತರರಾಷ್ಟ್ರೀಯ ಖ್ಯಾತಿಯ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ 09-03-1951 ರಂದು ಮುಂಬೈನಲ್ಲಿ ಜನಿಸಿದ್ದರು. ಹಿಂದೂಸ್ಥಾನಿ, ಶಾಸ್ತ್ರೀಯ ಸಂಗೀತ ಮತ್ತು ಜಾಯ್ ಫ್ಯೂಷನ್ ಅಭ್ಯಾಸ ಮಾಡಿದ್ದರು. ತಬಲಾ ವಾದನದ ಜೊತೆಗೆ ಸಂಗೀತ ನಿರ್ದೇಶನ, ನಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇಂಗ್ಲೀಷ್ ಗಿಟಾರ್ ವಾದಕ ಜಾನ್ ಮೆಕ್ ಲಾಗ್ಸನ್, ಪಿಟೀಲು ವಾದಕ ಎಲ್.ಶಂಕರ್ ಮತ್ತು ತಾಳವಾದುಗಾರ ಟಿ.ಹೆಚ್.ವಿನಾಯಕರಾಮ್ ಅವರದೊಂದಿಗೆ 1973ರಲ್ಲಿ ನಡೆಸಿಕೊಟ್ಟ ವಿಶಿಷ್ಟ ಯೋಜನೆ ಸಂಗೀತ ಕ್ಷೇತ್ರದಲ್ಲಿ ಅಪ್ರತಿಮವೆನಿಸಿತ್ತು. ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. 5 ಗ್ರ್ಯಾಮಿ ಪ್ರಶಸ್ತಿಗಳನ್ನು ಪಡೆದ್ದರು. ಜಾಕೀರ್ ಹುಸೇನ್ 15-12-2024 ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಿಧರಾಗಿದ್ದಾರೆ ಎಂದು ಸದನಕ್ಕೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಿಳಿಸದರು.
ಉಪಮುಖ್ಯಮಂತ್ರಿಗಳು,ಜಲಸಂಪನ್ಮೂಲ ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಮಾತನಾಡಿ, ಮಾಜಿ ಶಾಸಕ ನರಸಿಂಹಸ್ವಾಮಿ ಜೆ. ಅವರ ತಂದೆ ಜಾಲಪ್ಪನವರು ಸಹ ರಾಜಕಾರಣಿಯಾಗಿದ್ದರು. ಒಮ್ಮೆ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು. ವೈಯಕ್ತಿಕವಾಗಿ ಅವರೊಂದಿಗೆ ಒಡನಾಟವಿತ್ತು. ಅವರ ನಿಧನದ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೇವರು ಕರುಣಿಸಲಿ ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಸಾವು ಬೆನ್ನ ಹಿಂದಿನ ನೆರಳಿನಂತೆ, ನಮ್ಮನು ಹಿಂಬಾಲಿಸುತ್ತಾ ಇರುತ್ತದೆ. ವಿಧಿಯ ನಿರ್ಣಯ ಬದಲಿಸಲು ಸಾಧ್ಯವಿಲ್ಲ. ನರಸಿಂಹಸ್ವಾಮಿ.ಜೆ ಬಿಜೆಪಿ ಪಕ್ಷದಿಂದಲೂ ಸ್ಪರ್ಧಿಸಿ ಗೆಲುವು ಕಂಡಿದ್ದರು. ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಇನ್ನಷ್ಟೂ ಕಾಲ ಬದುಕಿದ್ದರೆ ಸಂಗೀತಕ್ಕೆ ಹೆಚ್ಚಿನ ಕೊಡುಗೆ ನೀಡುತ್ತಿದ್ದರು ಎಂದು ಹೇಳಿದರು.
ಮೃತರ ಗೌರವಾರ್ಥ ವಿಧಾನ ಸಭೆಯಲ್ಲಿ ಒಂದು ನಿಮಿಷಗಳ ಕಾಲ ಮೌನಾಚರಣೆ ಆಚರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು