ಇತ್ತೀಚಿನ ಸುದ್ದಿ
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ 14ರ ವರೆಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ
08/05/2024, 19:46
ಬೆಂಗಳೂರು(reporterkarnataka.com): ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ನಾಯಕ, ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗುವುದು.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಅವರನ್ನು ಮೇ 4 ರಂದು ಹಾಸನದಲ್ಲಿ ಬಂಧಿಸಿದ್ದರು. ಅವರ ಎಸ್ ಐಟಿ ಕಸ್ಟಡಿ ಬುಧವಾರ ಅಂತ್ಯವಾದ ಹಿನ್ನಲೆಯಲ್ಲಿ ಅವರನ್ನು ಇಂದು 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯ ಅವರಿಗೆ ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ರೇವಣ್ಣ ಅವರನ್ನು ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ತಿಳಿದು ಬಂದಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆ ನಡೆಯಲಿದೆ.