5:25 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಆರೋಪ: ಕೊಟ್ಟೂರು ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಂಧನ

24/09/2022, 22:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್​​ ಕಾನ್ಸ್​​ಟೇಬಲ್​​ ಎಂ.ಮಾರಪ್ಪ ಎಂಬುವರನ್ನು ಬಂಧಿಸಲಾಗಿದೆ.

ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನ ಮೇರೆಗೆ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್​​ ಕಾನ್ಸ್​​ಟೇಬಲ್​​ ಎಂ ಮಾರಪ್ಪ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಘಟನೆ ಬೆನ್ನಲ್ಲೇ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಆದೇಶ ಹೊರಡಿಸಿದ್ದಾರೆ.

ಪ್ರಕರಣದ ವಿವರ: ದೂರುದಾರ ಮಹಿಳೆ ಹಣದ ವಿಚಾರವಾಗಿ ಚಿಕ್ಕಪ್ಪನ ಮಗಳ ಜೊತೆ ಜಗಳವಾಡಿದ್ದಳು. ಈ ಕುರಿತು ಮಹಿಳೆ ಪಟ್ಟಣದ ಪೊಲೀಸ್ ಠಾಣೆಗೆ ಸೆ.18 ರಂದು ದೂರು ಕೊಡಲು ಹೋಗಿದ್ದಾರೆ. ಆಗ ಕರ್ತವ್ಯದಲ್ಲಿದ್ದ ಹೆಡ್​​ ಕಾನ್ಸ್​​ಟೇಬಲ್​​ ಮಾರಪ್ಪ ಹೆಸರು ಮತ್ತು ವಿಳಾಸ ಕೊಟ್ಟು ಹೋಗಿ ನಂತರ ನಿಮ್ಮನ್ನು ಸಂಪರ್ಕಿಸುವೆ ಎಂದು ಹೇಳಿದ್ದಾರೆ.

ಸೆ. 21ರಂದು ಮಹಿಳೆಗೆ ಕರೆ ಮಾಡಿದ ಮಾರಪ್ಪ, ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ತಿಳಿಸಿ, ನಿಮ್ಮ ಮನೆಯಲ್ಲಿ ಯಾರ‍್ಯಾರು ಇದ್ದೀರಿ ಎಂದು ಕೇಳಿದ್ದಾನೆ. ಅಲ್ಲದೇ ನಿನ್ನ ಮೇಲೆ ಮನಸಾಗಿದೆ. ನಾನು ನೀನು ದಾವಣಗೆರೆ ಮತ್ತಿತರ ಕಡೆ ಎಲ್ಲಾದರು ಸೇರೋಣ ಎಂದು ಲೈಂಗಿಕ ಸಮ್ಮತಿಗೆ ಒತ್ತಾಯಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದಂತೆ ದೂರುದಾರ ಮಹಿಳೆ, ಕೊಟ್ಟೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಮಹಿಳೆ ನೀಡಿರುವ ದೂರು ಹಾಗೂ ಪೊಲೀಸ್ ಅಧಿಕಾರಿ ನೀಡಿರುವ ದೂರನ್ನು ಸಬ್ ಇನ್ಸ್​​ಪೆಕ್ಟರ್ ವಿಜಯ್‌ ಕೃಷ್ಣ ತನಿಖೆ ಕೈಗೊಂಡಿದ್ದಾರೆ. ಸದ್ಯ ಆರೋಪಿ ಮಾರಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೇವೆಯಿಂದಲೂ ಅಮಾನತುಗೊಳಿಸಲಾಗಿದೆ ಎಂದು ಎಸ್​ಪಿ ಡಾ. ಅರುಣ್‌ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು