6:01 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಪ್ರಕರಣ: ಲೇಖಕ ಚಂದ್ರನ್  ನಿರೀಕ್ಷಣಾ ಜಾಮೀನು ರದ್ದು ಕೋರಿ ಕೇರಳ ಸರಕಾರ ಹೈಕೋರ್ಟ್ ಗೆ ಮೊರೆ 

23/08/2022, 19:55

ತಿರುವನಂತಪುರ(reporterkarnataka.com): ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಲೇಖಕ ಸಿವಿಕ್ ಚಂದ್ರನ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯದ 

ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಕೇರಳ ಸರಕಾರ ಸೋಮವಾರ ಹೈಕೋರ್ಟ್‌ಗೆ ಮೊರೆ ಹೋಗಿದೆ.

ಚಂದ್ರನ್‌ಗೆ ಜಾಮೀನು ನೀಡುವಾಗ, ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಸ್. ಕೃಷ್ಣ ಕುಮಾರ್ ಅವರು, ಮಹಿಳೆ  ‘ಪ್ರಚೋದನಕಾರಿ ಉಡುಗೆ’ ಧರಿಸಿದ್ದರೆ ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಕಾನೂನು ಅನ್ವಯಿಸುವುದಿಲ್ಲ ಎಂದು ಹೇಳಿದ್ದರು.

ಈ ಆದೇಶವು ಆಕ್ರೋಶವನ್ನು ಹುಟ್ಟುಹಾಕಿದ್ದು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು “ನ್ಯಾಯಾಲಯವು ಅಂತಹ ಹೇಳಿಕೆಗಳ ದೂರಗಾಮಿ ಪರಿಣಾಮಗಳನ್ನು ಕಡೆಗಣಿಸಿದೆ” ಎಂದು ಹೇಳಿದ್ದರು.

ಈ ಆದೇಶವು ಕಾನೂನುಬಾಹಿರ, ಅನ್ಯಾಯ ಮತ್ತು ದೂರುದಾರರಿಗೆ ಆಘಾತ ಉಂಟುಮಾಡಬಹುದು ಎಂದು ರಾಜ್ಯ ಸರಕಾರ ತನ್ನ ಮನವಿಯಲ್ಲಿ ಸಲ್ಲಿಸಿದೆ.

ಸೆಷನ್ಸ್ ನ್ಯಾಯಾಲಯದ ಅಂಶಗಳು ಹಾಗೂ ಅವಲೋಕನಗಳು ಅತ್ಯಂತ ಶೋಚನೀಯ, ಅವಮಾನಕರ. ಮಹಿಳಾ ವಿರೋಧಿ ಮತ್ತು ಇದು ಅಂತಿಮವಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಗೆ ಹಾನಿ ಮಾಡುತ್ತದೆ ಎಂದು ಅರ್ಜಿಯಲ್ಲಿ ಸೇರಿಸಲಾಗಿದೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು