11:09 PM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಪ್ರಕರಣದ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕಾರ: ಬೊಂದೇಲ್ ನಿವಾಸಿಯ ಬಂಧನ; ತೀವ್ರ ವಿಚಾರಣೆ

28/10/2021, 16:19

ಮಂಗಳೂರು(reporterkarnataka.com)ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ 48ರ ಹರೆಯದ ಅನಂತ್ ಭಟ್ ಅವರು
ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

ರಾಜೇಶ್ ಭಟ್’ಗೆ ಸೇರಿದ ಕಾರು, ಫೋನ್ ಸಹ ಅಜ್ಞಾತ ಸ್ಥಳದಲ್ಲಿಟ್ಟು ಪೊಲೀಸರ ತನಿಖೆಯನ್ನು ಹಾದಿ ತಪ್ಪಿಸಲು ಅನಂತ್ ಭಟ್ ಯತ್ನಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ.ಅನಂತ್ ಭಟ್ ಅವರನ್ನು ಇದೀಗ ಪೊಲೀಸರು  ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.

ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈವರೆಗೂ ವಕೀಲ ರಾಜೇಶ್ ಭಟ್ ಪತ್ತೆಯಾಗಿಲ್ಲ. 

ಸದ್ಯ ರಾಜೇಶ್ ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೇಶ್ ಅವರನ್ನು ಬೇರೆ ಸ್ಥಳದಲ್ಲಿ ಬಿಟ್ಟು ಬಂದಿರುವುದಾಗಿ ಅನಂತ್ ಮಾಹಿತಿ ನೀಡಿದ್ದು ಅಲ್ಲಿ ಬೇರೆ ಕಾರು, ಮೊಬೈಲ್, ಸಿಮ್ ಬಳಸುತ್ತಿರುವ ಬಗ್ಗೆ ಅನಂತ್ ವಿಚಾರಣೆ ವೇಳೆ ಮಾಹಿತಿ ಬಹಿರಂಗ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು