6:37 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

Lakkasandra Building Collapse: ಬೆಂಗಳೂರಿನ ಲಕ್ಕಸಂದ್ರದಲ್ಲಿ ಕುಸಿಯಿತು ಮೂರು ಅಂತಸ್ತಿನ ಮನೆ !!

27/09/2021, 15:47

ಬೆಂಗಳೂರು (Reporterkarnataka.com)

ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಮನೆಯಲ್ಲಿ 20ಕ್ಕೂ ಹೆಚ್ಚು ಜನರು ವಾಸವಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಹೇಳಲಾಗುತ್ತಿದೆ.

ಈ ದೃಶ್ಯವೂ ಹಲವಾರು ಮಂದಿಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು,
ಶಾಸಕ ರಾಮಲಿಂಗಾರೆಡ್ಡಿ ಮನೆಯಿಂದ ಕೊಂಚ ದೂರದಲ್ಲಿಯೇ ಈ ಕಟ್ಟಡವಿದ್ದು ಮೆಟ್ರೋ‌ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕರು ಕಟ್ಟಡದಲ್ಲಿ ವಾಸವಾಗಿದ್ದರು. ಹಳೇ ಕಟ್ಟಡ ಕುಸಿತದಿಂದ ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ. ಕಟ್ಟಡ ಕುಸಿಯುವುದಕ್ಕಿಂತ ಕೆಲ ಸಮಯ ಮುನ್ನ ಅಗ್ನಿಶಾಮಕ ಸಿಬ್ಬಂದಿ ಕಾರ್ಮಿಕರನ್ನು ತೆರವುಗೊಳಿಸಿದ್ದರು. ಹೀಗಾಗಿ ಭಾರಿ ಅನಾಹುತ ತಪ್ಪಿದೆ. .

ಲಕ್ಕಸಂದ್ರದ 7ನೇ ಮುಖ್ಯರಸ್ತೆ, 14ನೇ ಕ್ರಾಸ್​ನಲ್ಲಿನ ಈ ಮೂರು ಅಂತಸ್ತಿನ ಕಟ್ಟಡವನ್ನು 1974ರಲ್ಲಿ ನಿರ್ಮಿಸಲಾಗಿತ್ತು. ಸುರೇಶ್ ಎಂಬುವವರಿಗೆ ಈ ಮನೆ ಸೇರಿದೆ. ರಾತ್ರಿ ವೇಳೆ ಈ ಹಳೆಯ ಕಟ್ಟಡ ಕುಸಿದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಈ ಕಟ್ಟಡದಲ್ಲಿ 40-45 ಮಂದಿ ಮೆಟ್ರೋ ಕಾರ್ಮಿಕರು ವಾಸಿಸುತ್ತಿದ್ದರು. ಸ್ವಲ್ಪದರಲ್ಲಿ ಪಾರಾಗಿ ಮನೆಯಿಂದ ಹೊರಬಂದಿದ್ದಾರೆ. ಯಾವುದೇ ಅನಾಹುತ ಸಂಭವಿಸಲಿಲ್ಲ ಎಂದು ಮನೆಯಲ್ಲಿ ವಾಸವಿದ್ದ ಸ್ಥಳೀಯ ದಂಪತಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು