4:27 PM Wednesday11 - March 2026
ಬ್ರೇಕಿಂಗ್ ನ್ಯೂಸ್
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಇತ್ತೀಚಿನ ಸುದ್ದಿ

ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ

11/03/2026, 16:17

ಗದಗ(reporterkarnataka.com): ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಉತ್ಖನನ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಉತ್ಖನನದಲ್ಲಿ ವಿಜಯನಗರ ಕಾಲದ ಆಭರಣಗಳು, 500-600 ವರ್ಷಗಳಷ್ಟು ಹಳೆಯ ಚಿನ್ನದ ನಾಣ್ಯಗಳು, ಕಲ್ಲಿನ ಮುಕುಟಮಣಿ, ತ್ರಿಮುಖ ನಾಗಶಿಲೆ, ಮತ್ತು ಪುರಾತನ ದೇವಾಲಯಗಳ ಅವಶೇಷಗಳು ಪತ್ತೆ ಆಗಿವೆ.
ಇದರ ಮೌಲ್ಯವು ಕೋಟ್ಯಂತರ ರೂಪಾಯಿ ಎಂದು ಈಗ ಖಚಿತವಾಗಿದೆ. ಇಲ್ಲಿನ ಕೋಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ಉತ್ಖನನ ಕಾರ್ಯ ನಡೆದಿತ್ತು. ಮನೆ ನಿರ್ಮಾಣಕ್ಕೆಂದು ಪಾಯ ಅಗೆಯುವ ಸಂದರ್ಭದಲ್ಲಿ ಪ್ರಜ್ವಲ್ ರಿತ್ತಿ ಅವರ ಕುಟುಂಬದವರಿಗೆ ಪುರಾತನ ಕಾಲದ 466 ಗ್ರಾಂ ಚಿನ್ನದ ಆಭರಣಗಳು ಸಿಕ್ಕಿದ್ದವು. ಇದಾದ ಮೇಲೆ ಈ ಭಾಗದಲ್ಲಿ ಉತ್ಖನನ ಕಾರ್ಯ ನಡೆಸಲಾಗಿತ್ತು.
ಇದೀಗ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಪತ್ತೆಯಾದ ಚಿನ್ನದ ನಿಧಿಯು ಬರೋಬ್ಬರಿ 500 ರಿಂದ 600 ವರ್ಷ ಹಳೆಯದ್ದಾಗಿದೆ. ಇದರ ಮೌಲ್ಯವು ಈಗ ಇರುವುದಕ್ಕಿಂತ 10 ಪಟ್ಟು ಹೆಚ್ಚು ಎಂದು ನಿಧಿ ಪರಿಶೀಲನಾ ಸಮಿತಿ ಹೇಳಿದೆ. ನಿಧಿ ಪರಿಶೀಲನಾ ಸಮಿತಿ ಅಧ್ಯಕ್ಷ, ಇತಿಹಾಸ ತಜ್ಞರಾದ ಡಾ. ಎಂ.ಎಸ್. ಕೃಷ್ಣಮೂರ್ತಿ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

*ಗದಗದಲ್ಲಿ ಚಿನ್ನದ ನಿಧಿ:* ನಿಧಿ ಪರಿಶೀಲನಾ ಸಮಿತಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದ ಚಿನ್ನದ ನಿಧಿ ಪ್ರಕರಣವು ಇಡೀ ರಾಜ್ಯದ ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಇಲ್ಲಿ ಸಿಕ್ಕಿರುವ ನಿಧಿ ಯಾವುದು ಹಾಗೂ ಅದರ ಮೌಲ್ಯದ ಬಗ್ಗೆ ಡಾ. ಎಂ.ಎಸ್. ಕೃಷ್ಣಮೂರ್ತಿ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಲಕ್ಕುಂಡಿಯಲ್ಲಿ ಪತ್ತೆಯಾದ ಆಭರಣಗಳ ಆಕಾರ, ವಿನ್ಯಾಸ ಮತ್ತು ತಯಾರಿಕೆಯ ಶೈಲಿಗಳನ್ನು ಪರಿಶೀಲನೆ ಮಾಡಿದ ಮೇಳೆ ಇದು ವಿಜಯನಗರ ಸಾಮ್ರಾಜ್ಯದ ಕಾಲಘಟ್ಟಕ್ಕೆ ಸೇರಿದ್ದವಾಗಿವೆ ಎನ್ನುವುದು ಖಚಿತವಾಗುತ್ತದೆ. ಇನ್ನು ಈ ಭಾಗದಲ್ಲಿ ನಡೆಸಲಾಗಿದ್ದ ಉತ್ಖನನ ಕಾರ್ಯದ ಸಂದರ್ಭದಲ್ಲಿ ಪತ್ತೆಯಾದ ಆಭರಣಗಳಲ್ಲಿ ಸಿಂಹ ಅಥವಾ ಕೀರ್ತಿ ಮುಖದ ವಿನ್ಯಾಸಗಳು ಇವೆ. ಇದು ಹೆಣ್ಣು ದೇವರಿಗೆ ಅರ್ಪಿಸಲು ತಯಾರಿಸಲಾದ ಆಭರಣವಾಗಿರಬಹುದು. ಮುಸ್ಲಿಂ ರಾಜರ ದಾಳಿಗಳ ಕಾಲದಲ್ಲಿ ಸುರಕ್ಷತೆಗಾಗಿ ಮುಚ್ಚಿಟ್ಟ ಚಿನ್ನವಾಗಿರುವ ಸಾಧ್ಯತೆಯೂ ಇದೆ ಎಂದು ಹೇಳಿದ್ದಾರೆ.

*ಇದು ಸಾಮಾನ್ಯ ಚಿನ್ನವಲ್ಲ:*
ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನವು ಸಾಮಾನ್ಯ ಚಿನ್ನವಲ್ಲ ಎಂದು ಹೇಳಲಾಗಿದೆ. ಪುರಾತನ ಕಾಲದ ಐತಿಹಾಸಿಕ ಆಭರಣಗಳಾಗಿದ್ದು, ಇದರ ಮೌಲ್ಯವು ಕನಿಷ್ಠ 10 ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ನಿಧಿಯ ಕಾಲಮಾನ ಯಾವುದು ಮತ್ತು ಮೌಲ್ಯಮಾಪನ ಮಾಡುವುದಕ್ಕಾಗಿ ಸರ್ಕಾರವು ಇತಿಹಾಸ ತಜ್ಞರಾದ ಡಾ. ಎಂ.ಎಸ್. ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ 6 ಜನ ಸದಸ್ಯರ ತಂಡವನ್ನು ರಚನೆ ಮಾಡಲಾಗಿತ್ತು. ತಂಡವು ಪರಿಶೀಲನೆ ನಡೆಸಿದ್ದು, ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಇನ್ನು ಈ ಆಭರಣಗಳಲ್ಲಿ ನೀಲಮಣಿ, ಪಚ್ಚೆ ಹಾಗೂ ಹವಳದಂತಹ ಅಮೂಲ್ಯ ಹರಳುಗಳನ್ನು ಅಳವಡಿಸಲಾಗಿದೆ. ಅವುಗಳ ಕಲಾತ್ಮಕತೆ ವಿಶೇಷವಾಗಿದ್ದು, ಪತ್ತೆಯಾದ ಚಿನ್ನದ ತೂಕ ಸುಮಾರು 470 ಗ್ರಾಂ ಇದೆ. ಇಂದಿನ ಮಾರುಕಟ್ಟೆಯ ಬೆಲೆಗೆ ಹೋಲಿಕೆ ಮಾಡಿದರೆ 80 ಲಕ್ಷ ರೂಪಾಯಿಗೂ ಹೆಚ್ಚು ಎಂದು ತಜ್ಞರ ಸಮಿತಿ ಹೇಳಿದೆ. ಈ ಮೂಲಕ ನಿಧಿ ಪ್ರಕರಣಕ್ಕೆ ಪ್ರಮುಖ ಟ್ವಿಸ್ಟ್‌ ಸಿಕ್ಕಂತಾಗಿದೆ.

*ಪ್ರಕರಣದ ಹಿನ್ನೆಲೆ ಏನು?:*
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ಪ್ರಜ್ವಲ್ ರಿತ್ತಿ ಎನ್ನುವ ಕುಟುಂಬಕ್ಕೆ 466 ಗ್ರಾಂ ಚಿನ್ನದ ಆಭರಣಗಳು ಸಿಕ್ಕಿದ್ದವು. ಚಿನ್ನದ ಆಭರಣಗಳು ಮತ್ತು ಕೆಲವು ತಾಮ್ರದ ವಸ್ತುಗಳನ್ನು ಸಹ ಈ ಕುಟುಂಬವು ಅತ್ಯಂತ ಪ್ರಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿತ್ತು. ಇದು ಲಕ್ಕುಂಡಿಯ ಐತಿಹಾಸಿಕ ಮಹತ್ವದ ವಿಷಯ ಚರ್ಚೆಯ ಮುನ್ನೆಲೆಗೆ ಬರುವಂತೆ ಮಾಡಿತು. ಈ ಭಾಗದಲ್ಲಿ ಸಿಕ್ಕ ನಿಧಿಯು ಸುಮಾರು 300 ವರ್ಷಗಳ ಹಳೆಯದ್ದು ಎಂದು ಪ್ರಾಥಮಿಕ ಹಂತದಲ್ಲಿ ಅಂದಾಜಿಸಲಾಗಿತ್ತಿ. ಆದರೆ ಇದೀಗ ಈ ಆಭರಣಗಳು 500ರಿಂದ 600 ವರ್ಷ ಹಳೆಯದ್ದಾಗಿವೆ ಎಂದು ಖಚಿತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು