7:52 PM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಲಕ್ಷ್ಮಣ ಸವದಿ ಬಿಜೆಪಿಗೆ ಮೋಸ ಮಾಡಿ ಹೋಗಿದ್ದಾರೆ, ಪಕ್ಷ ಈಗ ಸ್ವಚ್ಛವಾಗಿದೆ: ರಮೇಶ್ ಜಾರಕಿಹೊಳಿ

22/04/2023, 20:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅವರು ಬಿಟ್ಟು ಹೋಗಿದ್ದರಿಂದ ಈಗ ಪಕ್ಷ ಸ್ವಚ್ಛವಾಗಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದರು.
ಅಥಣಿ ಪಟ್ಟಣದಲ್ಲಿ ಶನಿವಾರ ನಡೆದ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಬುಟಾಳಿ ಹಾಗೂ ಕನ್ನಡ ಪರ ಹೋರಾಟಗಾರ ರವಿ ಪೂಜಾರಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸವದಿ ಬಹಳಷ್ಟು ನಾಯಕರಿಗೆ ಮೋಸ ಮಾಡಿದ್ದಾರೆ.

ಬಿ.ಎಲ್.ಪಾಟೀಲ್, ಲೀಲಾವತಿ ಆರ್.ಪ್ರಸಾದ್, ಸಂತೋಷ್, ದಿ.ಉಮೇಶ್ ಕತ್ತಿ ಅವರಿಗೆ ಮೋಸ ಮಾಡಿ ಸುಮ್ಮನೆ ಅಳುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹರಿಹಾಯ್ದರು.


ಮಹೇಶ್ ಕುಮಠಳ್ಳಿ ಹಾಗೂ ನನಗೆ ಮೋಸ ಆಗಿದೆ. ನಾವು ಪಕ್ಷ ನಿಷ್ಠೆಯಿಂದ ಪಕ್ಷದಲ್ಲಿದ್ದೇವೆ. ಆದರೆ ಲಕ್ಷ್ಮಣ ಸವದಿ ಎಲ್ಲ ಅಧಿಕಾರ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಮತದಾರರು ಅವರನ್ನು ನೀವು ನಂಬಬೇಡಿ. ನೀವು ಅವರಿಗೆ ದಯವಿಟ್ಟು ಬುದ್ದಿ ಕಲಿಸಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು