12:44 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ, ಯಾಸೀನ್‌ಗೆ ಜಾಮೀನು

24/03/2026, 21:54

ಬೆಂಗಳೂರು(reporterkarnataka.com): ಲ್ಯಾಂಬೊರ್ಗಿನಿ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಆರೋಪದ ಮೇಲೆ ದಾಖಲಾಗಿರುವ ಪ್ರಕಣದಲ್ಲಿ ಮಾಜಿ ಡಾನ್‌ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹಾಗೂ ಯಾಸೀನ್‌ ಎಂಬವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಟ್ರಾಫಿಕ್‌ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ರಿಕ್ಕಿ ರೈ ಮತ್ತು ಯಾಸೀನ್‌ ಅವರಿಗೆ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಸಂಚಾರ ನ್ಯಾಯಾಲಯ-5) ಎಚ್‌. ಕೆ. ಅಖಿಲಾ ಅವರು ಜಾಮೀನು ಮಂಜೂರು ಮಾಡಿದ್ದಾರೆ.
ಅರ್ಜಿದಾರ/ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್‌, ತಲಾ ಮೂರು ಸಾವಿರ ರೂಪಾಯಿ ನಗದು ಭದ್ರತೆ ಸಲ್ಲಿಸಬೇಕು. ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
*ವೇಗದ ಚಾಲನೆ:* ಸಮಾಜ ಸೇವೆ ಮಾಡಲು ಅಣಿಯಾಗಿ ಎಂದು ಲ್ಯಾಂಬೊರ್ಗಿನಿ ಕಾರು ಮಾಲೀಕನಿಗೆ ಹೈಕೋರ್ಟ್‌ ಸೂಚನೆ
*ಪ್ರಕರಣದ ಹಿನ್ನೆಲೆ:* 21.03.2026ರ ಬೆಳಗಿನ ಜಾವ2-3 ಗಂಟೆಯ ವೇಳೆ ಮಹಾತ್ಮ ಗಾಂಧಿ ರಸ್ತೆಯ ಅನಿಲ್‌ ಕುಂಬ್ಳೆ ವೃತ್ತದ ಸಮೀಪ ಅತಿವೇಗ ಮತ್ತು ಅಜಾಗರೂಕತೆಯಿಂದ ಲ್ಯಾಂಬೊರ್ಗಿನಿ ಕಾರು ಚಾಲನೆ ಮಾಡಿ ಗಿರಿಗಿಟ್ಲೆಯ ರೀತಿಯಲ್ಲಿ ಕಾರನ್ನು ಸುತ್ತಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಆಧರಿಸಿ ಕಬ್ಬನ್‌ ಪಾರ್ಕ್‌ ಸಂಚಾರ ಠಾಣೆಯ ಪೊಲೀಸರು ಭಾರತೀಯ ಮೋಟಾರು ವಾಹನಗಳ ಕಾಯಿದೆ ಸೆಕ್ಷನ್‌ 184,189 ಮತ್ತು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 281ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು