10:44 PM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಕೇಸ್‌; ಮುತ್ತಪ್ಪ ರೈ ಪುತ್ರ ರಿಕ್ಕಿ ರೈಯಿಂದ ಕಾರು ಡ್ರಿಫ್ಟಿಂಗ್?

22/03/2026, 22:40

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka@gmail.com

ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಲಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಡ್ರಿಫ್ಟಿಂಗ್‌ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಕಾರಿನ ದಾಖಲೆಗಳು ಯಾರ ಹೆಸರಿನಲ್ಲಿವೆ ಎಂದು ಪರಿಶೀಲಿಸಲು ಆರ್‌ಟಿಒಗೆ ಪೊಲೀಸರು ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಲ್ಯಾಂಬೊರ್ಗಿನಿ ಕಾರ್ ಸೀಜ್ ಮಾಡಲಾಗಿದೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಎರಡು ಮೂರು ಬಾರಿ ಕಾರು ಡ್ರಿಫ್ಟಿಂಗ್ ಮಾಡಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವೈರಲ್ ಆಗಿರುವ ವಿಡಿಯೊದಲ್ಲಿ KA 05 NR 0009 ನೋಂದಣಿ ಸಂಖ್ಯೆಯ ಕಾರು ಸಾರ್ವಜನಿಕ ರಸ್ತೆಯಲ್ಲಿ, ಅದರಲ್ಲೂ ಫ್ಲೈಓವರ್ ಕೆಳಗೆ ಇತರ ವಾಹನಗಳ ಸಂಚಾರವಿರುವಾಗಲೇ ‘ಡೋನಟ್’ ಸ್ಟಂಟ್‌ಗಳನ್ನು ಮಾಡುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಜಾಗೃತ ನಾಗರಿಕರೊಬ್ಬರು ಈ ವಿಡಿಯೋವನ್ನು ಎಕ್ಸ್ (ಟ್ವಿಟರ್) ಮೂಲಕ ಬೆಂಗಳೂರು ಪೊಲೀಸರ ಗಮನಕ್ಕೆ ತಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು