4:53 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಲಂಚ ಪ್ರಕರಣ: ಮಂಗಳೂರು ತಹಶೀಲ್ದಾರ್ ಪುರಂದರ ಹೆಗ್ಡೆ, ಸಹಾಯಕ ಅಧಿಕಾರಿ ಶಿವಾನಂದ ಲೋಕಾಯುಕ್ತ ಬಲೆಗೆ

01/10/2022, 12:36

ಮಂಗಳೂರು(reporterkarnataka.com): ಲಂಚ ಸ್ವೀಕರಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳೂರು ತಹಶೀಲ್ದಾರ್ ಹಾಗೂ ಸಹಾಯಕ ಅಧಿಕಾರಿಯನ್ನು ಬಂಧಿಸಿದ್ದಾರೆ.
ತಹಶೀಲ್ದಾರ್ ಪುರಂದರ ಹೆಗ್ಡೆ ಹಾಗೂ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
ಜಾಗ ಮಾರಾಟದ ವಿಷಯದಲ್ಲಿ ನಿರಕ್ಷೇಪಣಾ ಪತ್ರ ಪಡೆಯಲು ಬಂದವರಿಗೆ 10 ಸಾವಿರ ರೂ. ನೀಡುವಂತೆ ಶಿವಾನಂದ ಅವರು ಬೇಡಿಕೆ ಇಟ್ಟಿದ್ದರು. ಅದರಂತೆ 10 ಸಾವಿರ ರೂ. ಲಂಚ ನೀಡುತ್ತಿದ್ದ ವೇಳೆ ಶಿವಾನಂದ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಶಿವಾನಂದ ಅವರ ವಿಚಾರಣೆ ನಡೆಸುತ್ತಿದ್ದ ವೇಳೆ ಅವರು ತಾನು ತಹಶೀಲ್ದಾರ್ ಪುರಂದರ ಹೆಗ್ಡೆ ಪರವಾಗಿ ಲಂಚ ಪಡೆದಿರುವುದಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ತಹಶೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು