1:41 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಲಂಚ ಸ್ವೀಕಾರ: ಅಥಣಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್, ಮೆನೇಜರ್ ಎಸಿಬಿ ಬಲೆಗೆ

22/09/2021, 17:44

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಲಂಚ ಸ್ವೀಕರಿಸುತ್ತಿದ್ದಾಗಲೇ ಅಥಣಿಯ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಕಚೇರಿಯ ಮ್ಯಾನೇಜರ್ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.


ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಇಂದ್ರಪ್ಪ ಪರಣಾಕರ ಹಾಗೂ ಮ್ಯಾನೇಜರ್ ದೀಪಕ ಕೃಷ್ಣಾಜಿ ಕುಲಕರ್ಣಿ ಅವರು ಗುತ್ತಿಗೆದಾರ ಒಬ್ಬರಿಂದ 68,000 ರೂ. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎಸಿಬಿಯಿಂದ ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಇಲಾಖೆ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಕಾಮಗಾರಿ ಗುತ್ತಿಗೆ ಪಡೆದ ಬೆಳಗಾವಿಯ ಗುತ್ತಿಗೆದಾರ ಒಬ್ಬರಿಂದ ಇಬ್ಬರೂ ಅಧಿಕಾರಿಗಳು ಶೇ.3 ರಷ್ಟು ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು