3:26 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

04/07/2025, 19:54

ಬೆಂಗಳೂರು(reporterkarnataka.com):ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

*ಪೊಲೀಸ್ ಕ್ರಮ:*
ಎಂ ಎಲ್ ಸಿ ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು