7:20 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !!

10/08/2021, 13:09

ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಸಭೆ ಆರಂಭವಾಗಿತ್ತು. ಜಲಜೀವನ್ ವಿಷನ್ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಸಚಿವರು ಕೇಳಿದರು. ಆದರೆ ಉತ್ತರಿಸಲು ಇಲಾಖೆಗೆ ಸಂಬಂಧಿಸಿದ ಯಾವುದೇ ಅಧಿಕಾರಿಗಳು ಇರಲಿಲ್ಲ. 

ಸಚಿವರು ಸಭೆ ಮುಂದುವರಿಸಿದರು. ತುಂಬಾ ಹೊತ್ತು ಕಳೆದ ಬಳಿಕ ಜಲಮಿಷನ್ ಯೋಜನೆಗೆ ಸಂಬಂಧಿಸಿದ ಅಧಿಕಾರಿ ಸಭೆಗೆ ಎಂಟ್ರಿ ಕೊಟ್ಟರು. ತಕ್ಷಣ ಗರಂ ಆದ ಸಚಿವರು ಅಧಿಕಾರಿಯನ್ನು ಸಭೆಯಿಂದ ಹೊರಗೆ ಕಳುಹಿಸಿದರು. ಸಭೆ ಮುಗಿದು ಸಚಿವರು ಹೊರಗೆ ಹೋಗುವ ವೇಳೆಯೂ ಅಧಿಕಾರಿ ಅಲ್ಲೇ ನಿಂತಿದ್ದರು. ಇದನ್ನು ಗಮನಿಸಿದ ಸುನಿಲ್ ಕುಮಾರ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. 

ಇತ್ತೀಚಿನ ಸುದ್ದಿ

ಜಾಹೀರಾತು