4:39 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

16/01/2026, 19:09

ದಾವಣಗೆರೆ(reporterkarnataka.com): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೃಹ ಸಚಿವರಿಗೆ ಪೊಲೀಸರ ಮೇಲೆ‌ ನಿಯಂತ್ರಣ ಇಲ್ಲ. ಯಾರಿಗೂ ಯಾರದೇ ಭಯ ಇಲ್ಲ. ಘನತೆ ಗೌರವ ಮೀರಿ ಅತ್ಯಂತ ಕೀಳು ಮಟ್ಟದ ಭಾಷೆ ಬಳಸುತ್ತಿದ್ದಾರೆ ಅಧಿಕಾರಿಗಳು, ಜನರು ಈ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.
ದಾವಣಗೆರೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ಕಾಂಗ್ರೆಸ್ ನಾಯಕ ಆವಾಜ್ ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೃಹ ಸಚಿವರಿಗೆ ಪೊಲೀಸರ ಮೇಲೆ‌ ನಿಯಂತ್ರಣ ಇಲ್ಲ. ಪೊಲೀಸ್ ಠಾಣೆಗಳು ಕಲೆಕ್ಷನ್ ಸೆಂಟರ್‌ಗಳಾಗಿವೆ. ಯಾರ ಭಯ ಯಾರಿಗೂ ಇಲ್ಲ. ಕಾಂಗ್ರೆಸ್ ನಾಯಕರು ಘನತೆ ಗೌರವ ಮೀರಿ ಅತ್ಯಂತ ಕೀಳು ಮಟ್ಟದ ಭಾಷೆ ಬಳಸುತ್ತಿದ್ದಾರೆ. ಅಧಿಕಾರಿಗಳು, ಜನರು ಈ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಎಚ್ಚರಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಳ್ಳಾರಿಯಿಂದ ಪಾದಯಾತ್ರೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷರು ಹೈಕಮಾಂಡ್ ಜೊತೆ ಮಾತನಾಡಿ ಶೀಘ್ರ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಮಾಡುವ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ಸದ್ಯಕ್ಕೆ ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಕೆಲಸ ಮಾಡುತ್ತಿದ್ದಾರೆ, ಸಂಘಟನೆ ನಡೆಯುತ್ತಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು