4:59 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಲೇಡಿಗೋಶನ್ ಆಸ್ಪತ್ರೆಯ ಅದಲು- ಬದಲು ಪ್ರಕರಣದ ಶಿಶು ಸಾವು: ಏನು ಕಾರಣ? ಮಗುವಿಗೆ ಉಸಿರಾಟದ ತೊಂದರೆ ಇತ್ತೇ? 

15/11/2021, 18:38

ಮಂಗಳೂರು(reporterkarnataka.com): ಭಾರಿ ಸುದ್ದಿಗೆ ಕಾರಣವಾಗಿದ್ದ ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ತಿಂಗಳ ಹಿಂದೆ ನಡೆದ ನವಜಾತ ಶಿಶು ‘ಅದಲು-ಬದಲು’ ಪ್ರಕರಣದ ಕುರಿತು ಕಾನೂನು ಹೋರಾಟ ನಡೆಯುತ್ತಿರುವ ಹಂತದಲ್ಲೇ ಮಗು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ಲೇಡಿಗೋಶನ್ ಆಸ್ಪತ್ರೆಯಲ್ಲಿ ಅ.15ರಂದು ಕುಂದಾಪುರ ಮೂಲದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದರು. ಆದರೆ ಮಗು ಅದಲು-ಬದಲು ಮಾಡಲಾಗಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದರು. 

ಆಸ್ಪತ್ರೆಯ ಸಿಬ್ಬಂದಿ ಮೊದಲು ಮಗು ಹೆಣ್ಣು ಎಂದು ನಮಗೆ ಹೇಳಿದ್ದರು. ದಾಖಲೆಗಳಲ್ಲಿ ಕೂಡ ಹೆಣ್ಣು ಮಗು ಎಂದೇ ನಮೂದಿಸಿದ್ದರು. ಆದರೆ ನಮಗೆ ಗಂಡು ಮಗುವನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಮಗು ಹಾಗೂ ಹೆತ್ತವರ ಡಿಎನ್‌ಎ ಪರೀಕ್ಷೆ ನಡೆಸಿ ಮಾದರಿಯನ್ನು ಹೈದರಾಬಾದಿಗೆ ಕಳುಹಿಸಿಕೊಡಲಾಗಿತ್ತು. ಆದರೆ ವರದಿ ಬರುವ ಮುನ್ನವೇ ಮಗು ಮೃತಪಟ್ಟಿದೆ. ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು