12:19 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಬೆಂಗ್ರೆ-ತಣ್ಣೀರುಬಾವಿ ಪರಿಸರದ ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ ಕಾನೂನು ತೊಡಕು: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

21/11/2025, 19:14

ಮಂಗಳೂರು(reporterkarnataka.com): ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕೇವಲ ಹಕ್ಕುಪತ್ರಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ಕಳೆದ ಅನೇಕ ವರ್ಷಗಳಿಂದ ಯಾವುದೇ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾಮ ಲೆಕ್ಕಾಧಿಕಾರಿಗಳು ನೀಡುವ ವಾಸ್ತವ್ಯ ದೃಢೀಕರಣ ಪತ್ರವೇ ಸಾಕಿತ್ತು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಅದೇ ನಿಯಮವಿದ್ದು ಸ್ಥಳೀಯರಿಗೆ ಯಾವುದೇ ತೊಂದರೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ನಿಯಮಗಳ ಪ್ರಕಾರ ವಾಸ್ತವ್ಯ ದೃಢೀಕರಣ ಪತ್ರ ಮಾತ್ರವಲ್ಲದೇ, ಈ ಪ್ರದೇಶಕ್ಕೆ ಲಭ್ಯವಿರದ ಇತರೆ ದಾಖಲೆ ಪತ್ರಗಳನ್ನೂ ಸಹ ಹಾಜರುಪಡಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ಇಲ್ಲ ಎನ್ನುತ್ತಿರುವುದು ಸ್ಥಳೀಯರಿಗೆ ಇನ್ನಿಲ್ಲದ ತಲೆ ನೋವಾಗಿದೆ ಎಂದರು.
ವಿದ್ಯುತ್ ಸಂಪರ್ಕವು ಮೂಲಭೂತ ಸೌಕರ್ಯವಾಗಿದ್ದು ರಾಜ್ಯ ಸರ್ಕಾರದ ಎಡವಟ್ಟಿನಿಂದಾಗಿ ಮೆಸ್ಕಾಂನವರಿಗೆ ಸಂಪರ್ಕ ನೀಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಕಳೆದ ಕೆಲವಾರು ತಿಂಗಳಿನಿಂದ ಇಲ್ಲಿನ ನೂರಾರು ಮನೆಗಳು ಕತ್ತಲೆಯಲ್ಲಿ ಬದುಕುವಂತಾಗಿದೆ. ಈ ಬಗ್ಗೆ ಸ್ಥಳೀಯರು ನೋವು ತೋಡಿಕೊಂಡಿದ್ದು ಕೂಡಲೇ ಹಿಂದಿನಂತೆಯೇ ಕ್ರಮ ವಹಿಸುವಂತೆ ಸ್ಥಳೀಯರ ಪರವಾಗಿ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು