4:14 PM Monday2 - June 2025
ಬ್ರೇಕಿಂಗ್ ನ್ಯೂಸ್
ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ… Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್… ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ…

ಇತ್ತೀಚಿನ ಸುದ್ದಿ

ಕೋಮು ದ್ವೇಷ ಭಾಷಣಕ್ಕೆ ಕಾನೂನು ರೀತಿಯಲ್ಲಿ ಉತ್ತರ: ಮಂಗಳೂರು ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ

01/06/2025, 14:59

ಮಂಗಳೂರು(reporterkarnataka.com): ದ.ಕ. ಜಿಲ್ಲೆಯಲ್ಲಿ ಎಲ್ಲೇ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹೇಳಿದ್ದಾರೆ.
ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ, ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ನಾವು ಜಂಟಿ ಕಾರ್ಯಾಚರಣೆ ನಡೆಸಲಿದ್ದೇವೆ. ಕ್ರಿಮಿನಲ್‌ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದವರು ಹೇಳಿದರು.
ಈ ಸಂದರ್ಭ ಜತೆಯಲ್ಲಿದ್ದ ಎಸ್ಪಿ ಡಾ. ಅರುಣ್ ಕುಮಾರ್ ಅವರೂ ದನಿಗೂಡಿಸಿ, ಅದಕ್ಕಾಗಿಯೇ ನಾವು ಜತೆಯಲ್ಲಿಯೇ ಇಲ್ಲಿದ್ದೇವೆ ಎಂದರು.
ಕೋಮು ದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಾಕುತ್ತಿರುವವರ ಕುರಿತು ಪ್ರಶ್ನೆಯೊಂದಕ್ಕೆ ಈ ಪ್ರತಿಕ್ರಿಯಿಸಿದ ಸುಧೀರ್ ರೆಡ್ಡಿ, ಯಾರದ್ದೇ ಯಾವ ಮಾತೂ ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವಂತಿರಬಾರದು. ವಾಕ್ ಸ್ವಾತಂತ್ರ್ಯ ಮತ್ತು ಅಪರಾಧ ಕೃತ್ಯಗಳಿಗೆ ಜನರನ್ನು ಪ್ರಚೋದಿಸುವ ಮಾತುಗಳ ನಡುವೆ ಸ್ಪಷ್ಟವಾದ ಅಂತರವಿದೆ. ಪ್ರಚೋದನೆ ನೀಡುವ ರೀತಿಯಲ್ಲಿ ಕಾನೂನಿಗೆ ವಿರುದ್ಧವಾಗಿ ಮಾತನಾಡಿದರೆ ಸಿಆರ್‌ಪಿಸಿ, ಐಪಿಸಿ ಕಾನೂನುಗಳಿವೆ. ಕಾನೂನಿನಲ್ಲಿ ಈ ಬಗ್ಗೆ ಕ್ರಮಕ್ಕೆ ಸಾಕಷ್ಟುಅವಕಾಶಗಳಿದ್ದು, ಇಲಾಖೆ ಸೂಕ್ತ ಕ್ರಮ ವಹಿಸಲಿದೆ ಎಂದು ಹೇಳಿದರು.
ಕೋಮು ದ್ವೇಷ,ಯಾವುದೇ ಘಟನೆ ಆದಾಗ ತನಿಖೆ ನಡೆಸುತ್ತೇವೆ. ಇಲ್ಲಿನ ಜನರು ಬುದ್ಧಿವಂತರು. ಅವರಿಗೆ ಕಾನೂನಿನ ಅರಿವಿದೆ. ನಮ್ಮ ಪೊಲೀಸ್ ಇಲಾಖೆಯೂ ಅದೇ ಕಾನೂನನ್ನು ಕಲಿತು, ಅದನ್ನು ಪಾಲಿಸುತ್ತದೆ. ಪ್ರತಿ ಅಪರಾಧಕ್ಕೂ ತಕ್ಕುದಾದ ಕಾನೂನು ಇದೆ. ಆ ಕಾನೂನಿಗೆ ಅನುಸಾರವಾಗಿ ಕ್ರಮ ಆಗುತ್ತದೆ ಎಂದು ಹೇಳಿದರು.
ಠಾಣೆಗಳಲ್ಲಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ತಳ ಹಂತದ ಪೊಲೀಸ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಯ ಅಗತ್ಯವಿರುವ ಬೇಡಿಕೆ ಕುರಿತ ಪ್ರಶ್ನೆಗೆ
ಪ್ರತಿಕ್ರಿಯಿಸಿದ ಅವರು, ಎಲ್ಲಾ ಅಧಿಕಾರಿ ಸಿಬ್ಬಂದಿ ಉತ್ತಮವಾಗಿದ್ದಾರೆ. ಯಾರೇ ತಮ್ಮ ಕರ್ತವ್ಯದಲ್ಲಿ ವಿಫಲ ಆಗಿದ್ದಾರೆ ಎಂದರೆ ಅದರ ಜವಾಬ್ಧಾರಿಯನ್ನು ನಾನು ವಹಿಸುತ್ತೇನೆ. ನಮ್ಮ ಮಾರ್ಗದರ್ಶನವನ್ನು ಸರಿಯಾದ ದಿಸೆಯಲ್ಲಿ ಬಳಸಿಕೊಂಡು ಅವರು ಕಾರ್ಯ ನಿರ್ವಹಿಸಿದಾಗ ಯಾವುದೇ ತೊಂದರೆ ಆಗದು ಎಂದರು.
ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಗಳ ಜತೆ ಉಸ್ತುವಾರಿ ಸಚಿವರು ನಮ್ಮ ಜತೆ ಚರ್ಚಿಸಿದ್ದಾರೆ. ಸಲಹೆ ಸೂಚನೆ ನೀಡಿದ್ದಾರೆ ಎಂದವರು ಹೇಳಿದರು.
ಪೊಲೀಸ್ ಕಮಿಷನರ್ ನಡೆಸುತ್ತಿದ್ದ ಫೋನ್ ಇನ್ ಕಾರ್ಯಕ್ರಮ ಮತ್ತೆ ಪುನರಾರಂಭ ಆಗಲಿದೆಯೇ ಎಂಬ ಪ್ರಶ್ನೆಗೆ, ಯಾವುದೇ ದೂರನ್ನು ಸಾರ್ವಜನಿಕರು ನೇರವಾಗಿ ನಮಗೆ ತರಬಹುದು. ಮಾಧ್ಯಮದ ಮೂಲಕ ಬಂದ ದೂರನ್ನು ಪರಿಗಣಿಸಲಾಗುವುದು. ಯಾವುದೇ ಅಪರಾಧ ಪ್ರಕರಣಗಳು ನಡೆದಾಗಲೂ ಹಿಂದೆಯೂ ತನಿಖೆ ಆಗಿದೆ. ಮುಂದೆಯೂ ಆಗಲಿದೆ. ನಮ್ಮ ಕೆಲಸವೇ
ಪೊಲೀಸಿಂಗ್ ಮಾಡುವಂತದ್ದು. ಅದನ್ನು ನಾವು ನಿಭಾಯಿಸುತ್ತೇವೆ ಎಂದು ಹೇಳಿದರು.
ಡಿಸಿಪಿ ಸಿದ್ದಾರ್ಥ್ ಗೋಯಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು