6:40 AM Wednesday12 - March 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ… Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ… Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು

ಇತ್ತೀಚಿನ ಸುದ್ದಿ

Legislative Council | ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್

10/03/2025, 18:01

ಬೆಂಗಳೂರು(reporterkarnataka.com): ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ಸಂಸ್ಥೆಗಳನ್ನು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ಈ ಕೇಂದ್ರಗಳನ್ನು ಸ್ಥಾಪಿಸಬೇಕೆಂಬ ಉದ್ದೇಶವಿದೆ. ಪ್ರಾರಂಭಿಕ ಹಂತದಲ್ಲಿ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು.
ಈಗಾಗಲೇ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಇದೇ ರೀತಿ ಕಲಬುರಗಿಯಲ್ಲೂ ಕೇಂದ್ರವನ್ನು ಪ್ರಾರಂಭ ಮಾಡಿದ್ದೇವೆ. ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲೂ ಇದನ್ನು ತೆರೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
*ಮಕ್ಕಳಲ್ಲಿ ಕ್ಯಾನ್ಸರ್‌ ಆತಂಕಕಾರಿ:*
ಮಕ್ಕಳಲ್ಲಿ ಇತ್ತೀಚೆಗೆ ಕ್ಯಾನ್ಸರ್ ಕಂಡುಬರುತ್ತಿರುವುದು ಅತ್ಯಂತ ಆತಂಕಕಾರಿ ವಿಷಯ. ಇದರ ಬಗ್ಗೆ ತಾಲ್ಲೂಕು ಹಾಗೂ ಜಿಲ್ಲಾಮಟ್ಟದಲ್ಲೂ ಸಾರ್ವಜನಿಕರಿಗೆ ಶಿಬಿರಗಳನ್ನು ಆಯೋಜಿಸುವ ಮೂಲಕ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದೇವೆ. ಸರ್ಕಾರದ ಮಟ್ಟದಲ್ಲೂ ಪ್ರತಿ ವರ್ಷ ಕಾರ್ಯಕ್ರಮಗಳನ್ನು ಆಯೋಜಿಸುತ್ತೇವೆ. ಆದರೂ ಕ್ಯಾನ್ಸರ್ ಹೆಚ್ಚಳವಾಗುತ್ತಿರುವುದು ಆತಂಕ ಸೃಷ್ಟಿಸಿದೆ ಎಂದು ಸಚಿವರು ವಿಷಾದಿಸಿದರು.
ಪ್ರತಿ ವರ್ಷ 1533 ಕ್ಯಾನ್ಸರ್ ಪ್ರಕರಣಗಳು 14 ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುತ್ತಿದೆ 876 ಗಂಡು ಮಕ್ಕಳು, 657 ಹೆಣ್ಣು ಮಕ್ಕಳು ಇದರಲ್ಲಿ ಸೇರ್ಪಡೆಯಾಗಿದೆ. ಮಕ್ಕಳಲ್ಲಿ ಪ್ರಾರಂಭಿಕ ಹಂತದಲ್ಲೇ ಅರಿವು ಮೂಡಿಸುವ ಕೆಲಸವಾಗಬೇಕು. ಕೇವಲ ಸರ್ಕಾರದಿಂದ ಮಾತ್ರವಲ್ಲದೆ ಸಂಘಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು, ಸಾರ್ವಜನಿಕರು ಕೈಜೋಡಿಸುವ ಮೂಲಕ ತಡೆಗಟ್ಟಬಹುದೆಂದು ಸಚಿವ ಶರಣಪ್ರಕಾಶ್ ಪಾಟೀಲ್ ಸಲಹೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು