12:43 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕದ್ರಿ, ಶಕ್ತಿನಗರ ಪ್ರದೇಶದಲ್ಲಿ ರಾತ್ರಿ ವೇಳೆ ಕಾಣಿಸಿಕೊಳ್ಳುವ ಚಿರತೆ: ಶಾಸಕ ಕಾಮತ್ ಅಧಿಕಾರಿಗಳ ಜತೆ ಸಭೆ

27/02/2026, 20:19

ಮಂಗಳೂರು(reporterkarnataka.com): ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.
ಕದ್ರಿ ಕೈಬಟ್ಟಲ್, ಶಕ್ತಿನಗರದ ಕೋರ್ಡೆಲ್‌ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ಈ ಎರಡೂ ಭಾಗಗಳಲ್ಲಿ ಕಾಣಿಸಿಕೊಂಡ ಚಿರತೆ ಒಂದೇ ಆಗಿರುವ ಸಾಧ್ಯತೆಯೂ ಇದೆ. ಚಿರತೆ ಸಂಚಾರ ಮಾಡಿರುವ ಪ್ರದೇಶದಲ್ಲಿ ಹಗಲು ರಾತ್ರಿ ಗಸ್ತು ತಿರುಗಲು ಅರಣ್ಯ ಇಲಾಖೆ ಸಿಬ್ಬಂದಿಯ ತಂಡವನ್ನು ನಿಯೋಜಿಸಿದ್ದೇವೆ. ಸದ್ಯ ಚಿರತೆ ಇಲ್ಲೇ ಉಳಿದಿರದೇ, ಕಾಡು ಪ್ರದೇಶಕ್ಕೆ ಮರಳಿರುವ ಬಗ್ಗೆ ಅಂದಾಜಿಸಲಾಗಿದೆ. ಹಾಗಿದ್ದೂ ಸಾರ್ವಜನಿಕರು ಚಿರತೆ ಸಹಿತ ಯಾವುದೇ ಅಪಾಯಕಾರಿ ಕಾಡುಪ್ರಾಣಿಗಳು ಕಂಡು ಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಟೋಲ್ ಫ್ರೀ ಸಂಖ್ಯೆ 1926 ಗೆ ಮಾಹಿತಿ ನೀಡಿ ಸಹಕರಿಸಿದರೆ ಇನ್ನಷ್ಟು ತ್ವರಿತ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ ರವರು ಶಾಸಕರ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಾಡು ಪ್ರಾಣಿಗಳು ಆಹಾರ ಅರಸಿಕೊಂಡು ನಾಡಿಗೆ ಬರುತ್ತಿರುವುದು ಸೂಕ್ಷ್ಮ ವಿಚಾರವಾಗಿದ್ದು, ಸಾರ್ವಜನಿಕರ ಸುರಕ್ಷತೆಯ ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೂ ಸಹ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಶಾಸಕರು ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು