8:53 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಜನಪರ ಯೋಜನೆಗಳು ಮನೆಮನೆ ತಲುಪಲಿ: ಬಿಜೆಪಿ ಜಿಲ್ಲಾ ವಕ್ತಾರ ಮಾಧವ ಮಾವೆ

09/09/2025, 14:00

ಬಂಟ್ವಾಳ(reporterkarnataka.com): ಸರಕಾರದಿಂದ ಸಿಗುವ ಸವಲತ್ತುಗಳನ್ನು ಬಡವರ ಮನೆಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡುವ ಮೂಲಕ ಪಕ್ಷ ಸಂಘಟನೆಯನ್ನು ಬಲಪಡಿಸಬೇಕು.ಕೇಂದ್ರ ಸರಕಾರದ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಪರ ಯೋಜನೆಗಳಿಂದ ರಾಷ್ಟ್ರದ ಅಭಿವೃದ್ಧಿಯೊಂದಿಗೆ ಜನಜೀವನಮಟ್ಟ ಸುಧಾರಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಾಧವ ಮಾವೆ ಹೇಳಿದರು.
ಅವರು ಬಿಜೆಪಿ ಬಂಟ್ವಾಳ ಮಂಡಲದ ಪೆರಾಜೆ ಶಕ್ತಿ ಕೇಂದ್ರದಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಸಭಾಂಗಣದಲ್ಲಿ ಏರ್ಪಡಿಸಲಾದ ಕಾರ್ಯಕರ್ತರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಮಾತನಾಡಿದರು.
ಪೆರಾಜೆ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಾಣಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಅರವಿಂದ‌ ರೈ , ಬಂಟ್ವಾಳ ಮಂಡಲ‌ ಅಭ್ಯಾಸ ವರ್ಗ ಸಂಚಾಲಕ ಹರೀಶ ಶೆಟ್ಟಿ,ಗ್ರಾಮ ಪಂಚಾಯತ್ ಸದಸ್ಯರಾದ ರಾಜಾರಾಮ ಕಾಡೂರು,ಹರೀಶ ರೈ ಪಾಣೂರು, ಮಮತಾ ತಿಲಕ ಗೌಡ ಉಪಸ್ಥಿತರಿದ್ದರು.


ಹಿರಿಯ ಸಹಕಾರಿ ಧುರೀಣ ಬಿ.ಟಿ.ನಾರಾಯಣ ಭಟ್ ದೀಪಬೆಳಗಿಸಿ ಚಾಲನೆ ನೀಡಿದರು. ಮಂಡಲ ಕಾರ್ಯದರ್ಶಿ ರವೀಶ ಶೆಟ್ಟಿ ಕರ್ಕಳ ಉದ್ಘಾಟನಾ ಭಾಷಣ ಮಾಡಿದರು. ಬಿಜೆಪಿ ನಾಯಕರಾದ ಸಂದೀಪ್ ಶೆಟ್ಟಿ ಅರೆಬೆಟ್ಟು,ಶಿವಪ್ರಸಾದ ಶೆಟ್ಟಿ, ಸುಲೋಚನಾ ಜಿ.ಕೆ.ಭಟ್ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಬೂತ್ ಸಮಿತಿ‌ ಅಧ್ಯಕ್ಷರಾದ ಗಣೇಶ ಕೊಂಕಣ ಪದವು,ಲೋಹಿತ್ ಮಂಜೊಟ್ಟಿ,ಪುರುಷೋತ್ತಮ ಮಡಲ ವಿವಿಧ ಗೋಷ್ಠಿಗಳ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿಯ ಪ್ರಮುಖರಾದ ದೇವಪ್ಪ ಪೂಜಾರಿ, ಸುದರ್ಶನ ಬಜ,ಹಿರಿಯ ಕಾರ್ಯಕರ್ತ ರಾದ ರಾಮಣ್ಣ ಗೌಡ ದೆಪ್ಪೊಳಿ,ಸೀತಾರಾಮ ನಾಯ್ಕ ಪಾಳ್ಯ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಕ್ತಿ ಕೇಂದ್ರ ಅಭ್ಯಾಸ ವರ್ಗದ ಸಂಚಾಲಕ ಉಮೇಶ ಎಸ್ಪಿ ಸ್ವಾಗತಿಸಿದರು. ಯತಿರಾಜ ಪಿ. ಕಾರ್ಯಕ್ರಮ
ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು