6:31 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

LIC | ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮದಿಂದ ಹೊಸ ಪಾಲಿಸಿ ಜೀವನ್ ಉತ್ಸವ್ ಪ್ಲಾನ್ ಬಿಡುಗಡೆ

07/12/2023, 14:04

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ (LIC) ಇದೀಗ ಹೊಸ ಪಾಲಿಸಿಯೊಂದನ್ನು ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಬಿಡುಗಡೆ ಮಾಡಿದೆ.
ಎಲ್‌ಐಸಿ ಪ್ರತಿನಿಧಿಗಳು ಜನರ ಭವಿಷ್ಯದ ದೃಷ್ಟಿಯಿಂದ ಹೆಚ್ಚು ಪಾಲಿಸಿ ಮಾಡಿಸಬೇಕು. ಅದಕ್ಕೆ ಪೂರಕವಾಗಿ ಭಾರತೀಯ ಜೀವ ವಿಮಾ ನಿಗಮ ಹೊಸದಾಗಿ ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಪರಿಚಯಿಸಿರುವ ಪಾಲಿಸಿಗಳ ಪರಿಚಯ ಮಾಡಿಕೊಡಬೇಕು ಎಂದು ತಾಲ್ಲೂಕು ಎಲ್‌ಐಸಿ ಉಪ ಶಾಖಾ ಕಚೇರಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್‌ ಹೇಳಿದರು.
ಪಟ್ಟಣದ ಎಲ್‌ಐಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಎಲ್‌ಐಸಿ ಏಜೆಂಟರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿಧಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಪಾಲಿಸಿ ಪಡೆದವರಿಗೆ ಉತ್ತಮ ಸೇವೆ ನೀಡಬೇಕು ಎಂದು ಹೇಳಿದರು.
ಎಷ್ಟೋ ಪಾಲಿಸಿದಾರರಿಗೆ ಎಲ್‌ಐಸಿ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿದಿರುವುದಿಲ್ಲ. ಹಾಗಾಗಿ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಆದ್ದರಿಂದ ಪ್ರತಿ ಪಾಲಿಸಿದಾರನಿಗೆ ಅರಿವು ಮೂಡಿಸುವ ಜವಾಬ್ದಾರಿ ಪ್ರತಿನಿಧಿಗಳದಾಗಿದೆ ಎಂದು ಹೇಳಿದರು.
ಪ್ರತಿನಿಧಿಗಳು ನಗರ ಹಾಗೂ ಪಟ್ಟಣಗಳನ್ನು ಮಾತ್ರ ಕೇಂದ್ರೀಕರಿಸದೆ, ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ ಪಾಲಿಸಿ ಮಾಡಿಸಬೇಕು. ಹಾಗೆ ಮಾಡುವುದರಿಂದ ಬಡವರು ಹಾಗೂ ಜನಸಾಮಾನ್ಯರಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ನಿಗಮದ ಉದ್ದೇಶವೂ ಈಡೇರುತ್ತದೆ ಎಂದು ಹೇಳಿದರು. ಎಲ್‌ಐಸಿ ಅಧಿಕಾರಿ ಡಿ. ರವಿಶಂಕರ್, ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ರವೀಂದ್ರಯ್ಯ ಆ‌ರ್.ಕುಲಕರ್ಣಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು