10:54 PM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಸಾಹಿತಿ ಭುವನೇಶ್ವರಿ ಹೆಗಡೆಗೆ ಕಲ್ಕೂರ ಪ್ರತಿಷ್ಠಾನದಿಂದ “ಜೀವಮಾನ ಸಾಧನಾ ಪ್ರಶಸ್ತಿ” ಪ್ರದಾನ

14/10/2026, 16:02

ಮಂಗಳೂರು(reporterkarnataka.com):ನಾಡಿನ ಖ್ಯಾತ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆಯವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿರುವ ಅನುಪಮವಾದ ಸೇವೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಕಲ್ಕೂರ ಪ್ರತಿಷ್ಠಾನದಿಂದ ಜೀವಮಾನ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಡೆದಾಡುವ ವಿಶ್ವಕೋಶ ಎಂದೇ ಪ್ರಸಿದ್ಧರಾಗಿದ್ದ ಡಾ. ಕೆ. ಶಿವರಾಮ ಕಾರಂತರ ಹುಟ್ಟು ಹಬ್ಬ ಸಮಾರಂಭದಲ್ಲಿ , ಕಾರ್ಯಕ್ರಮ ಸಂಯೋಜಿಸಿದ್ದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅವರು ಸಾಹಿತಿ ಭುವನೇಶ್ವರಿ ಹೆಗಡೆಯವರನ್ನು ಅಭಿನಂದಿಸಿದರು.
ಹಿರಿಯ ಸಾಹಿತಿ ಪ್ರೊ. ಬಿ. ಎ. ವಿವೇಕ ರೈ, ಕಾರಂತ ಪ್ರಶಸ್ತಿ ಪುರಸ್ಕೃತ ಖ್ಯಾತ ಲೇಖಕಿ ವೈದೇಹಿ, ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ, ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಭುವನೇಶ್ವರಿ ಹೆಗಡೆಯವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭ ಹಿರಿಯ ಲೇಖಕ ಎಚ್. ಶಾಂತರಾಜ ಐತಾಳ್, ಪ್ರೊ. ಜಿ.ಕೆ ಭಟ್ ಸೇರಾಜೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು