8:12 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪೊಲೀಸರ ಮಿಂಚಿನ ಕಾರ್ಯಾಚರಣೆ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷನ‌ ಕೊಲೆ ಆರೋಪಿಯ ಬಂಧನ

08/08/2026, 22:55

ಉಡುಪಿ(reporterkarnataka.com) ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಸಂಜೆ ಹಾಡಹಗಲೇ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿಯ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಪೊಲೀಸರು ಆರೋಪಿ ರಾಜು ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ ಘಟನೆಯೂ ನಡೆದಿದೆ.

ಆರೋಪಿಯನ್ನು ಕಾಪು ಪಿಎಸ್‌ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ಪರಾರಿಯಾಗಲು ಯತ್ನಿಸಿದ್ದಾರೆ, ಈ ವೇಳೆ ಕಾಪು ಪಿಎಸ್‌ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಈ ವೇಳೆ ಪಿಎಸ್‌ಐ ತೇಜಸ್ವಿ ಅವರಿಗೆ ಗಾಯವಾಗಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಗೆ ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು