8:26 PM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಜೆಡಿಎಸ್ ಗೆ 3 ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಚಿಂತನೆ; ಗೌಡ್ರು ಒಪ್ಪಿಕೊಂಡ್ರೆ ಒಂದೆರಡು ದಿನಗಳಲ್ಲಿ ಸಖ್ಯ ಪಕ್ಕಾ

05/10/2023, 10:25

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಎಲ್ಲವೂ ಅಂದುಕೊಂಡಂತೆ ನಡೆದರೆ ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೆರಡು ದಿನಗಳಲ್ಲಿ ಪಕ್ಕಾ ಆಗಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಮೈತ್ರಿ ಸೂತ್ರವನ್ನು ಬಿಜೆಪಿಯು ಜೆಡಿಎಸ್ ಮುಂದಿಟ್ಟಿದೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಈ ಮೈತ್ರಿ ಸೂತ್ರವನ್ನು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರ ಮುಂದಿಟ್ಟಿದ್ದಾರೆ. ದೇವೇಗೌಡರ ತವರು ಜಿಲ್ಲೆಯಾದ ಹಾಸನ ಲೋಕಸಭಾ ಕ್ಷೇತ್ರದ ಜತೆಗೆ ಮಂಡ್ಯ ಮತ್ತು ತುಮಕೂರು ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಬಿಜೆಪಿ ಸಿದ್ಧವಾಗಿದೆ. ಬಿಜೆಪಿಯ ಈ ಆಫರನ್ನು ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಒಪ್ಪಿಕೊಂಡರೆ ಒಂದೆರಡು ದಿನಗಳಲ್ಲಿ ಉಭಯ ಪಕ್ಷಗಳ ಮೈತ್ರಿಗೆ ಅಧಿಕೃತ ಮುದ್ರೆ ಬೀಳಲಿದೆ. ಕೇವಲ 3 ಕ್ಷೇತ್ರಗಳನ್ನು ಜೆಡಿಎಸ್ ಒಪ್ಪಿಕೊಳ್ಳದಿದ್ದರೆ, ಬಿಜೆಪಿಯು ಜೆಡಿಎಸ್ ಗೆ
ಜೆ.ಪಿ. ನಡ್ಡಾ, ಅಮಿತ್ ಷಾ ಅವರ ಜತೆ ಮತ್ತೊಂದು ಸುತ್ತಿನ ಮಾತುಕತೆಗೆ ಅವಕಾಶ ನೀಡಲಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಹಿನ್ನಡೆ ಕಂಡ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೆ ಈಗಾಗಲೇ ಜೆಡಿಎಸ್ ಸಿದ್ಧತೆಯಲ್ಲಿ ತೊಡಗಿದೆ. ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ದೇವೇಗೌಡರ ದೆಹಲಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿರುವುದರಿಂದ ಜೆಡಿಎಸ್ ಗೆ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲುವುದು ಕಷ್ಟಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯಾವುದೇ ತಕರಾರು ಮಾಡದೆ ಬಿಜೆಪಿ ನೀಡುವ 3 ಕ್ಷೇತ್ರಗಳನ್ನು ಒಪ್ಪಿಕೊಂಡು ಮೈತ್ರಿಗೆ ಅಂತಿಮ ಮುದ್ರೆಯೊತ್ತುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು