7:31 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ

11/05/2026, 10:14

ನವದೆಹಲಿ(reporterkarnataka.com): ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮೂಡಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ಜಾಗತಿಕ ಬಿಕ್ಕಟ್ಟನ್ನು ಎಷ್ಟೇ ನಿಭಾಯಿಸಿದರೂ ಸಾಲದು. ಸಾಧ್ಯವಾದಷ್ಟು ಪೆಟ್ರೋಲ್​​-ಡೀಸೆಲ್​​ ಅನ್ನು ಮಿತವಾಗಿ ಬಳಸುವ ಮೂಲಕ ದೇಶದ ಮೀಸಲು ಸಂಪತ್ತನ್ನು ಉಳಿಸಲು ಜನರು ಕೈಜೋಡಿಸಬೇಕು. ತೈಲವನ್ನು ಮಿತವಾಗಿ ಬಳಸಬೇಕು ಮತ್ತು ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ಮಾಡುವ ಸಂಸ್ಕೃತಿಗೆ ಆದ್ಯತೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ನಾಗರಿಕರ ಸಹಕಾರ ಅಗತ್ಯ ಎಂದರು.

*ತೈಲ, ಚಿನ್ನದ ಉಳಿತಾಯಕ್ಕೆ ಒತ್ತು:*
ಭಾರತದ ಬಳಿ ಬೃಹತ್ ತೈಲ ಬಾವಿಗಳಿಲ್ಲ, ನಾವು ಇಂಧನಕ್ಕಾಗಿ ಆಮದಿನ ಮೇಲೆ ಅವಲಂಬಿತರಾಗಿದ್ದೇವೆ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಅತ್ಯಂತ ಜಾಗರೂಕತೆಯಿಂದ ಬಳಸುವ ಸಮಯ ಬಂದಿದೆ ಎಂದು ಅವರು ಎಚ್ಚರಿಸಿದರು. ಇಂಧನ ಉಳಿತಾಯವು ದೇಶದ ಆರ್ಥಿಕತೆಗೆ ದೊಡ್ಡ ಬಲ ನೀಡಲಿದೆ ಎಂದು ಅವರು ಒತ್ತಿ ಹೇಳಿದರು.
ಇದೇ ವೇಳೆ ಆಮದನ್ನು ಕಡಿಮೆ ಮಾಡುವ ಉದ್ದೇಶದಿಂದ, “ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸಬೇಡಿ” ಎಂಬ ಅಚ್ಚರಿಯ ಮನವಿಯನ್ನು ಪ್ರಧಾನಿ ಮಾಡಿದರು. ಚಿನ್ನದ ಆಮದಿನಿಂದಾಗಿ ದೇಶದ ವಿದೇಶಿ ವಿನಿಮಯದ ಮೇಲೆ ಹೊರೆಯಾಗುತ್ತಿದ್ದು, ದೇಶದ ಆರ್ಥಿಕ ಹಿತದೃಷ್ಟಿಯಿಂದ ಜನರು ಈ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ವಿನಂತಿಸಿದರು.

*ವರ್ಕ್​​​ ಫ್ರಂ ಹೋಂಗೆ ಆದ್ಯತೆ:*
ಸಾರಿಗೆ ವೆಚ್ಚ ಮತ್ತು ಇಂಧನ ಬಳಕೆಯನ್ನು ತಗ್ಗಿಸಲು ಕಂಪನಿಗಳು ಮತ್ತು ಉದ್ಯೋಗಿಗಳು ‘ವರ್ಕ್ ಫ್ರಮ್ ಹೋಮ್’ ಮಾದರಿಯನ್ನು ಮತ್ತೆ ಅನುಸರಿಸುವಂತೆ ಪ್ರಧಾನಿಯವರು ಸಲಹೆ ನೀಡಿದರು. ಸಂಘರ್ಷದ ಈ ಸಮಯದಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ರಾಷ್ಟ್ರೀಯ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ ಮೋದಿ, ಜನಸಾಮಾನ್ಯರು ಸಹ ಸರ್ಕಾರದೊಂದಿಗೆ ಕೈಜೋಡಿಸಿ ಆರ್ಥಿಕ ಶಿಸ್ತು ಕಾಪಾಡಬೇಕು ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು