12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಲಿಂಗಸುಗೂರು ಪುರಸಭೆ ಆಡಳಿತದ ನಿರ್ಲಕ್ಷ್ಯ: 7 ತಿಂಗಳು ಕಳೆದರೂ ವಿದ್ಯಾರ್ಥಿನಿಯರಿಗೆ ಮಂಜೂರಾಗದ ವ್ಯಾಸಂಗ ವೇತನ

11/07/2021, 08:44

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೋವಿಡ್ ನಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದು, ಪೋಷಕರಿಗೆ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ಒಂದೇ ಸಲ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿವೆ. ಆದರೆ ಲಿಂಗಸಗೂರು ಪುರಸಭೆಯ ಎಸ್ ಸಿಪಿ- ಟಿಎಸ್ ಪಿ ಯೋಜನೆಯಡಿ ನೀಡಬೇಕಾಗಿದ್ದ ವಿದ್ಯಾರ್ಥಿ ವೇತನವನ್ನು ಇನ್ನೂ ಪಾವತಿಸದೆ ನಿರ್ಲಕ್ಷ್ಯ ವಹಿಸಿದೆ.

2021ರ ಜನವರಿ 15ರಂದು 2020- 21ನೇ ಸಾಲಿನ ಅನುದಾನದಲ್ಲಿ ವಿವಿಧ ಹಂತದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ವಿಶೇಷ ನೆರವಿನ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಸುಮಾರು 7 ತಿಂಗಳುಗಳು ಕಳೆದರೂ ಅರ್ಜಿ ಸಲ್ಲಿಸಿದ ವಿದ್ಯಾರ್ಥಿನಿಯರಿಗೆ ಇನ್ನೂ ವ್ಯಾಸಂಗ ವೇತನ ಪಾವತಿ ಆಗಿರುವುದಿಲ್ಲ. ಇದಕ್ಕೆ ಯಾರು ಹೊಣೆ.? ಆದಷ್ಟು ಬೇಗನೆ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳು ವಿದ್ಯಾರ್ಥಿನಿಯರಿಗೆ ವೇತನ ಮಂಜೂರು ಮಾಡಲು ಮುಂದಾಗುತ್ತಾರಾ? ಕಾದು ನೋಡಬೇಕಾಗಿದೆ?

ಇತ್ತೀಚಿನ ಸುದ್ದಿ

ಜಾಹೀರಾತು