2:55 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ, ಕೃಷಿ ಅಧಿಕಾರಿ ಸಿದ್ದಪ್ಪ ಸಸ್ಪೆಂಡ್

20/02/2025, 15:54

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ ಆರೋಪದ
ಹಿನ್ನೆಲೆಯಲ್ಲಿ ಲಿಂಗಸುಗೂರ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಎ.ಡಿ. ನಾಗರತ್ನ ಎಚ್. ಹುಲಕೋಟಿ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ಬಾಚಿಹಾಳ ಅವರನ್ನು ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಿಫಾರಸ್ಸು ಮೇರೆಗೆ ಕರ್ನಾಟಕ ಸರಕಾರದ ಕೃಷಿ ಇಲಾಖೆ ಕಾರ್ಯದರ್ಶಿಗಳು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಲಿಂಗಸುಗೂರ ತಾಲೂಕಿನ ಆನೆಹೋಸೂರ ಹಾಗೂ ಇತರೆ ಗ್ರಾಮ ಪಂಚಾಯತಿಯಲ್ಲಿ 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಇಲಾಖೆಯ ಮುಖೇನ ಅನುಷ್ಠಾನಗೊಂಡ ಕಾಮಗಾರಿಗಳಿಲ್ಲಿ 2,75,7307 ಕೋಟಿ ರೂ‌ ಗಳ ಅವ್ಯವಹಾರಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರಗಿಸಲು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಲಿಂಗಸುಗೂರ ಅವರು ಕೋರಿದ ಹಿನ್ನಲೆಯಲ್ಲಿ ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದ ವಿವಿಧ ಇಲಾಖೆ 7 ತನಿಖಾ ಅಧಿಕಾರಿಗಳ ತಂಡ ವರದಿ ಹಿನ್ನಲೆಯಲ್ಲಿ ಉದ್ಯೋಗ ಖಾತ್ರಿ ಬದು ನಿರ್ಮಾಣ ಕಾಮಗಾರಿ ಅವ್ಯವಹಾರ ಅನುದಾನ ದುರ್ಬಳಕೆಗೆ ಕಾರಣವಾಗಿದೆ. ಎ.ಡಿ. ನಾಗರತ್ನ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ವಿರುದ್ಧ ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸರಕಾರದ ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಶಿಸ್ತು ಕ್ರಮಕ್ಕೆ ವರದಿ ಸಲ್ಲಿಸಿದ್ದಾರೆ. ಅದರಂತೆ ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ ದೃಢಪಟ್ಟಿದ್ದು,
ಕೃಷಿ ಇಲಾಖೆ ಆಯುಕ್ತರು ಕೃಷಿ ಸಹಾಯಕ ನಿರ್ದೇಶಕಿ ನಾಗರತ್ನ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವರು. ರಾಯಚೂರು ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ ಕೃಷಿ ಆಯುಕ್ತರಿಗೆ ಪತ್ರ ಬರೆದು ಲಿಂಗಸುಗೂರಿನ ಕೃಷಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು