3:14 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಎಲ್‍ಎಲ್‍ಬಿ ಪರೀಕ್ಷೆ: ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಡಿ.20ರಂದು ಹೈಕೋರ್ಟ್ ನಲ್ಲಿ ವಿಚಾರಣೆ

20/12/2021, 11:49

ಬೆಂಗಳೂರು(reporterkarnataka.com): ಐದು ವರ್ಷಗಳ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.20ರಂದು ವಿಚಾರಣೆಗೆ ಬರಲಿದೆ.  

ಐದು ವರ್ಷಗಳ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಕೆ.ಪಿ. ಪ್ರಭುದೇವ್ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠದಲ್ಲಿ ನಡೆಯಲಿದೆ. 

ಸಾಕಷ್ಟು ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗೆ ಹಾಜರಾಗಿಲ್ಲ. ತರಗತಿ ಆಲಿಸಲು ಲ್ಯಾಪ್‍ಟಾಪ್, ಡೆಸ್ಕ್‍ಟಾಪ್ ಮತ್ತು ಇಂಟರ್‍ನೆಟ್ ಸೇರಿ ಇತರೆ ಅಗತ್ಯ ಸೌಲಭ್ಯಗಳಿರಲಿಲ್ಲ. ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾದ ಶಿಕ್ಷಣ ದೊರೆತಿಲ್ಲ. ಇದೇ ಕಾರಣಕ್ಕೆ ಮೂರು ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರಿಕ್ಷೆ ನಡೆಸಲು ವಿವಿ ಹೊರಡಿಸಿದ್ದ ಅಧಿಸೂಚನೆಯನ್ನು ಧಾರವಾಡ ಹೈಕೋರ್ಟ್ ಪೀಠ ಡಿ.14ರಂದು ರದ್ದುಪಡಿಸಿದೆ.

ಇದೇ ರೀತಿ 5 ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆಯನ್ನು ಕೂಡ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು