4:57 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಾಲ ಕಂತು ಬಾಕಿ: ಫ್ರೀಡಂ ಫೈಟರ್ ಪತ್ನಿಯ ಕಿವಿಯೊಲೆ, ಚೈನ್ ಎಗರಿಸಿದ ಬ್ಯಾಂಕ್ ಸಿಬ್ಬಂದಿ!

16/02/2025, 22:37

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ ಫೈಟರ್ ಪತ್ನಿಗೆ ಲೋನ್ ಕಟ್ಟಿಲ್ಲವೆಂದು ಕಿವಿಯಲ್ಲಿದ್ದ ಓಲೆಯನ್ನು ಬ್ಯಾಂಕ್ ನವರು ಮಂಗಮಾಯ ಮಾಡಿರುವ ಘಟನೆ ತಾಲ್ಲೂಕಿನ ಕೋಣಂದೂರಿನಲ್ಲಿ ನಡೆದಿದೆ.
ತಾಲೂಕಿನ ಬಿಲ್ಲೇಶ್ವರ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಎಸ್ ಚನ್ನವೀರಪ್ಪನವರ ಪತ್ನಿ ಹಾಲಮ್ಮನವರಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ಪಿಂಚಣಿ ಹಣ ಬರುತ್ತಿಲ್ಲ ಇದರ ನಡುವೆ ಈ ಹಿಂದೆ ಮನೆ ದುರಸ್ಥಿಗೆಂದು ಪಿಂಚಣಿ ಹಣದ ಆಧಾರದ ಮೇಲೆ ಮಾಡಿದ್ದ ಲೋನ್ ನ ಒಂದು ಕಂತು ಕಟ್ಟಿಲ್ಲವೆಂದು ಕಿವಿಯಲ್ಲಿದ್ದ ಓಲೆಯನ್ನು ಪಡೆದು 86 ರ ವಯೋವೃದ್ದೆಗೆ ನಿಂದಿಸಿ ಹೊರದಬ್ಬಿರುವ ಬಗ್ಗೆ ಕೋಣಂದೂರು ಉಪಠಾಣೆಯಲ್ಲಿ ದೂರು ದಾಖಲಾಗಿದೆ.
ಪಿಂಚಣಿ ಹಣದ ಆಧಾರದ ಮೇಲೆ ಮನೆ ದುರಸ್ಥಿಗೆ ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ ವೃದ್ದೆ ಕಳೆದ ನಾಲ್ಕು ತಿಂಗಳುಗಳಿಂದ ಪಿಂಚಣಿ ಹಣ ಬಂದಿಲ್ಲ ಈ ಹಿನ್ನಲೆಯಲ್ಲಿ ಲೋನ್ ತೀರುವಳಿ ಮಾಡಿರಲಿಲ್ಲ ಹಾಗೇಯೇ ಫೆಬ್ರವರಿ 10 ರಂದು ಮನೆಯಲ್ಲಿ ರೇಷನ್ ಕೊರತೆಯ ಕಾರಣ ಕಿವಿಯಲ್ಲಿದ್ದ ಓಲೆ ಚೈನ್ ನ್ನು ಅಡವಿಡಲು ಬ್ಯಾಂಕ್ ಗೆ ಬಂದರೇ ಕಲ್ಲು ಮನಸ್ಸಿನ ಬ್ಯಾಂಕ್ ಅಧಿಕಾರಿಗಳು ಚೈನ್ ನ್ನು ಪಡೆದು ಹಣ ನೀಡದೇ ಅವಾಚ್ಯವಾಗಿ ಏಕವಚನದಲ್ಲಿ ನಿಂದಿಸಿ ಹೊರದಬ್ಬಿದ್ದಾರೆ ಎಂದು ವೃದ್ದೆಯ ಮಗಳು ಶಕುಂತಳಾ ಆರೋಪಿಸಿದ್ದಾರೆ.
ಬಿಲ್ಲೇಶ್ವರ ಗ್ರಾಮದ ಎಸ್ ಚನ್ನವೀರಪ್ಪ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿ ದೇಶಸೇವೆ ಮಾಡುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅವರ ಬಗ್ಗೆ ನನಗೆ ಅತೀವ ಹೆಮ್ಮೆ ಇದೆ. ಆದರೆ ನಮ್ಮನ್ನು ಸರ್ಕಾರಗಳು ಹಾಗೂ ವ್ಯವಸ್ಥೆ ಇಷ್ಟು ನಿಕೃಷ್ಟವಾಗಿ ಕಾಣುತ್ತಿರುವುದು ಬೇಸರದ ಸಂಗತಿ ಎಂದು 87ರ ಹರೆಯದ ವೃದ್ದೆ ಹಾಲಮ್ಮ ತಮ್ಮ ನೋವನ್ನು ತೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು