ಇತ್ತೀಚಿನ ಸುದ್ದಿ
ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್
14/10/2025, 23:22

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ಲೈನ್ ಮನೆಯಲ್ಲಿರುವ ಅಸ್ಸಾಂ ಕಾರ್ಮಿಕರಿಗೆ ಹಾಡಹಗಲೇ ವಾಹನದಲ್ಲಿ ರಾಜಾರೋಷವಾಗಿ ಮಾರಾಟ ಮಾಡುತ್ತಿದ್ದ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಚೇರಂಬಾಣೆಯಲ್ಲಿ ವಾರದ ಸಂತೆಯಾಗಿರುವ ಹಿನ್ನಲ್ಲೆಯಲ್ಲಿ ಬಹಿರಂಗವಾಗಿ ಗೋವು ಮಾಂಸ ಸಿಗದೆ ಇರುವ ಹಿನ್ನಲೆಯಲ್ಲಿ ಸ್ಥಳೀಯ ಹಸ್ಯನರ್ ಅಸ್ಸಾಂ ಕಾರ್ಮಿಕರಿಗೆ ಸರಬರಾಜು ಮಾಡುತ್ತಿದ್ದ, ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೆರೆಗೆ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ಕುಕ್ಕೆರ ಅಜಿತ್ ನೇತೃತ್ವದಲ್ಲಿ ತಂಡ ಆರೋಪಿಯನ್ನು ಮಾಂಸ ಸಮೇತ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಭಾಗಮಂಡಲ ಪೊಲೀಸರು ಆಗಮಿಸಿ ಹಸ್ಯನರ್ ಬಂಧಿಸಿ ಮಾಂಸ ವನ್ನು ವಶಕ್ಕೆ ಪಡೆದಿದ್ದಾರೆ.