11:33 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು