11:23 PM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಲೋಕಸಭಾ ಚುಣಾವಣೆ: ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ

19/03/2024, 12:52

ಮಂಗಳೂರು(reporterkarnataka.com): ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚನೆ ನೀಡಿದ್ದಾರೆ.


ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜಕೀಯ ಪಕ್ಷಗಳು, ಚುನಾವಣೆ ಸಂಬಂಧ ನಡೆಸಲಾಗುವ ಸಭೆ-ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳಿಗೆ, ವಾಹನ ಬಳಕೆಗಾಗಿ ಅನುಮತಿ ಪಡೆಯಲು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗಿರುವ ಏಕ ಗವಾಕ್ಷಿ ಪದ್ದತಿಯಡಿ ಅರ್ಜಿ ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಭಾರತ ಚುನಾವಣಾ ಆಯೋಗವು “ಸುವಿಧಾ ಆಪ್” ಪರಿಚಯಿಸಿದೆ, ಈ ಆಪ್ ಮೂಲಕವು ಅನುಮತಿ ಪಡೆಯಬಹುದಾಗಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ಮತ್ತು ವಾಹನ ಪರವಾನಿಗೆಗಾಗಿಯೂ ಅನುಮತಿ ಪಡೆಯಬೇಕು. ಸ್ಟಾರ್ ಪ್ರಚಾರಕರು ಹಾಗೂ ಪ್ರಚಾರ ಸ್ಥಳಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಮಾದರಿ ನೀತಿ ಸಂಹಿತೆಯು ಎಲ್ಲಾ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಯಮಗಳನ್ನು ಪಾಲನೆ ಮಾಡುವುದರಿಂದ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಚುನಾವಣೆ ನಡೆಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಸಹ ಸಹಕಾರ ನೀಡಬೇಕೆಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿಗಳಾದ ಡಾ. ಸಂತೋಷ್ ಕುಮಾರ್,‌ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು