2:27 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ; ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರತಿ ಕ್ಷೇತ್ರಕ್ಕೆ ವೀಕ್ಷಕರ ನೇಮಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

26/08/2023, 21:51

ಮಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಪಕ್ಷದ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲು ಎಐಸಿಸಿ ಪ್ರತಿ ಸಂಸದೀಯ ಕ್ಷೇತ್ರಕ್ಕೆ ಒಬ್ಬ ಸಚಿವರು ಮತ್ತು ಪಕ್ಷದ ಹಿರಿಯ ಮುಖಂಡರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.


ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಯುವ ನಿಧಿ ಯೋಜನೆ ಡಿಸೆಂಬರ್‌ನಲ್ಲಿ ಜಾರಿಗೆ ಬರಲಿದೆ ಎಂದರು.
ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲ್ಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆಗೆ ಕನಿಷ್ಠ 6 ತಿಂಗಳ ಮೊದಲು ಅಭ್ಯರ್ಥಿಗಳನ್ನು ಘೋಷಿಸಲು ನಾವು ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ. ಪ್ರತಿ ಕ್ಷೇತ್ರಕ್ಕೆ ಪಕ್ಷದ ವೀಕ್ಷಕರ ಪಟ್ಟಿಯನ್ನು ಎಐಸಿಸಿ ಶೀಘ್ರವೇ ಬಿಡುಗಡೆ ಮಾಡಲಿದೆ. ಈ ಬಾರಿ ಇಂಡಿಯಾ ಅಧಿಕಾರಕ್ಕೆ ಬರಲಿದೆ. ರಾಹುಲ್ ಗಾಂಧಿ ಅವರು ಪ್ರಧಾನಿ ಆಗಲಿದ್ದಾರೆ. ಒಂಬತ್ತೂವರೆ ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಜನರ ಖಾತೆಗಳಿಗೆ 15 ಲಕ್ಷ ರೂಪಾಯಿ ಜಮೆಯೇ ಮಾಡಲಿಲ್ಲ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.
ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸಿ ಮಾಡುತ್ತೇವೆ ಎಂದಿದ್ದರು, ಆದರೆ ನಿರುದ್ಯೋಗಕ್ಕೆ ಕಾರಣ ಆಗಿದ್ದಾರೆ. 6 ವರ್ಷಗಳಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವಲ್ಲಿ ಸರಕಾರ ವಿಫಲ ಆಗಿದೆ. ಎರಡೂ ಜಿಲ್ಲೆಗಳಿಗೆ ಪಕ್ಷವು ವಿಶೇಷ ಒತ್ತು ನೀಡಲಿದ್ದು, ಚುನಾವಣೆ ಗೆಲುವಿಗೆ ತಂತ್ರಗಾರಿಕೆ ಮಾಡಲಿದ್ದೇವೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಚುನಾವಣೆ ಎದುರಿಸಲು ನಮ್ಮ ಕಾರ್ಯತಂತ್ರಗಳೂ ಬದಲಾಗುತ್ತವೆ. ಪಕ್ಷವನ್ನು ಮತ್ತಷ್ಟು ಬಲಪಡಿಸಲು ಬೂತ್ ಮಟ್ಟದಲ್ಲಿಯೂ ಸಂಘಟನೆ ಮಾಡುತ್ತೇವೆ. ಜನರು ಬದಲಾವಣೆ ಬಯಸುತ್ತಿದ್ದು, ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸ ಹೆಚ್ಚಾಗಿದೆ ಎಂದರು.
ನಾವು ಯಾವುದೇ ಅಪರೇಷನ್ ಕಾರ್ಯಾಚರಣೆಯಲ್ಲಿ ತೊಡಗಿಲ್ಲ. ಮುಂದಿನ ಐದು ವರ್ಷಗಳ ಕಾಲ ಕರ್ನಾಟಕದಲ್ಲಿ ಪ್ರಬಲ ಮತ್ತು ಸ್ಥಿರ ಸರ್ಕಾರ ನೀಡಲು ಪಕ್ಷವು 136 ಶಾಸಕರನ್ನು ಹೊಂದಿರುವ ಸ್ಪಷ್ಟ ಬಹುಮತವನ್ನು ಹೊಂದಿದೆ. ಬಿಜೆಪಿ ಮತ್ತು ಜೆಡಿಎಸ್‌ನ ಹಲವು ನಾಯಕರು ನಮ್ಮನ್ನು ಸಂಪರ್ಕಿಸಿದ್ದಾರೆ. ಪಕ್ಷ ಸೇರಲು ಅವಕಾಶ ನೀಡುವ ಕುರಿತು ಹೈಕಮಾಂಡ್‌ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು.
ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ ಮಾಡಿಕೊಂಡಿದೆ. ಬಿಜೆಪಿಯವರು ಕೇವಲ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವುದರಲ್ಲಿ ತೊಡಗಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 90 ದಿನಗಳಲ್ಲಿ ಕಾಂಗ್ರೆಸ್ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ
ಬಿ. ರಮಾನಾಥ ರೈ, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಐವನ್ ಡಿಸೋಜ, ಲುಕ್ಮನ್ ಬಂಟ್ವಾಳ, ಸುದರ್ಶನ್ ಜೈನ್, ತೇಜಶ್ವಿ ರಾಜ್, ಶಾಹುಲ್ ಹಮೀದ್, ಟಿ. ಎಂ .ಶಾಹಿದ್, ಸದಾಶಿವ ಉಳ್ಳಾಲ್, ಜೋಕಿಮ್ ಡಿಸೋಜ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು