3:51 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ

14/05/2024, 21:34

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್(ಟ್ವಿಟರ್)ನಲ್ಲಿ ಹೇಳಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿಎಸ್ ವೈ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದು ಮುಖ್ಯಮಂತ್ರಿ ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು