7:06 AM Sunday12 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಗೇಮ್ ಪ್ಲಾನ್ ಸಿದ್ದವಾಗುತ್ತಿದೆಯೇ?: ಜೆಡಿಎಸ್ – ಬಿಜೆಪಿಯ ರಣತಂತ್ರ ಏನು?

07/06/2023, 10:25

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯ ವಿಧಾನಸಭೆ ಚುನಾವಣೆಯ ಬಳಿಕ ಮತ್ತೊಂದು ರಾಜಕೀಯ ಧ್ರುವೀಕರಣಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ ಹಾಗೂ ಪಾತಾಳಕ್ಕೆ ಕುಸಿದ ಜೆಡಿಎಸ್ ಹೊಸ ಗೇಮ್ ಪ್ಲಾನ್ ಸಿದ್ದಪಡಿಸುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಗಾಗಿ ಈ ಮೆಗಾ ಡೀಲ್ ತಯಾರಿಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳನ್ನು ಬಾಚಿಕೊಂಡಿದ್ದ ಬಿಜೆಪಿ ಈ ಬಾರಿ ಕನಿಷ್ಠ 20 ಸೀಟುಗಳನ್ನಾದರೂ ಉಳಿಸಿಕೊಳ್ಳುವ ಟಾರ್ಗೆಟ್ ಹಾಕಿಕೊಂಡಿದೆ. ಅದೇ ರೀತಿ ವಿಧಾನಸಭೆ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲೇ ಕುಸಿತ ಕಂಡ ಜೆಡಿಎಸ್ ಗೆ
ತನ್ನ ಅಸ್ತಿತ್ವ ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ. ಜೆಡಿಎಸ್ ತನ್ನ ಮಾನ ಉಳಿಸಿಕೊಳ್ಳಬೇಕಾದರೆ ಕನಿಷ್ಠ 5 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕಾಗಿದೆ. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಜೋಡೆತ್ತಿನ ರಾಜ್ಯ ಸರಕಾರದ ಮುಂದೆ ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ತನ್ನ ಟಾರ್ಗೆಟ್ ಮುಟ್ಟುವುದು ಅಷ್ಟು ಸುಲಭದ ಮಾತಲ್ಲ. ಪ್ರಧಾನಿ ಮೋದಿ ವರ್ಚಸ್ಸು, ಹಿಂದುತ್ವ ವರ್ಕ್ ಔಟ್ ಆಗೊಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಹೊಸ ಪ್ಲಾನ್ ಸಿದ್ಧವಾಗಿದೆ.
ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ಗೆಲುವು ಸಾಧಿಸಲು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೊಸ ಪ್ಲಾನ್ ಸಿದ್ದಪಡಿಸಿದ್ದಾರೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ವಿಶ್ವಸನೀಯ ಮೂಲಗಳಿಂದ ಗೊತ್ತಾಗಿದೆ. ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಜತೆ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ ಎನ್ನಲಾಗಿದೆ. ಇದರ ಪ್ರಕಾರ ರಾಜ್ಯದ ಓಟ್ಟು 28 ಕ್ಷೇತ್ರಗಳ ಪೈಕಿ ಕನಿಷ್ಠ 5 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕು. ಉಳಿದ ಕಡೆ ಜೆಡಿಎಸ್ , ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲಿಸುವುದು ಆಗಿದೆ. ಈ ವಿಷಯದಲ್ಲಿ ಕುಮಾರಸ್ವಾಮಿ ಮತ್ತು ಬಿ.ಎಲ್. ಸಂತೋಷ್ ಸಹಮತಕ್ಕೆ ಬಂದಿದ್ದಾರೆ. ಹಾಗೆ ಚೆಂಡನ್ನು ಬಿಜೆಪಿ ಹೈಕಮಾಂಡ್ ಅಂಗಳಕ್ಕೆ ತಳ್ಳಿದೆ. ಇನ್ನು ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಜತೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜಕೀಯದಲ್ಲಿ ಏನು ಬೇಕಾದರೂ ನಡೆಯಬಹುದು ಎನ್ನುವುದು ಬರೇ ಮಾತಲ್ಲ, ವಾಸ್ತವ ಕೂಡ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು