1:52 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಿಗೆ ದಾಳಿ

15/05/2025, 13:41

ಬೆಂಗಳೂರು(reporterkarnataka.com): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದ ಮೇಲೆ ರಾಜ್ಯದ ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಲ್ಲಿ ಸರಕಾರಿ ಅಧಿಕಾರಿಗಳ ಕಚೇರಿ ಮತ್ತು ಮನೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.


ಸುಮಾರು 150ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲಕ್ಕೆ 7 ನಗರಗಳಲ್ಲಿ ದಾಳಿ ನಡೆದಿದೆ. ಬೆಂಗಳೂರು, ಮಂಗಳೂರು,ತುಮಕೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ,ಯಾದಗಿರಿಯ ಶಹಾಪುರದಲ್ಲಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಬೆಂಗಳೂರಿನ 12 ಕಡೆಗಳಲ್ಲಿ ಬೆಂಗಳೂರು ಗ್ರಾಮಾಂತರ 8, ಯಾದಗಿರಿ 5, ವಿಜಯಪುರ 4,ಮಂಗಳೂರಿನ 4 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು
ದಾಳಿ ಮಾಡಿದ್ದಾರೆ. ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ. ತುಮಕೂರಿನಲ್ಲಿ ನಿರ್ಮಿತಿ ಕೇಂದ್ರದ‌ ನಿರ್ದೇಶಕ ರಾಜಶೇಖರ್, ಮಂಗಳೂರಿನಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್, ‌ ವಿಜಯಪುರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ರೇಣುಕಾ. ಸಾತರ್ಲೆ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕರ ಮುರಳಿ ಟಿವಿ, ಬೆಂಗಳೂರು ಕಾನೂನು ಮಾಪನಶಾಸ್ತ್ರದ ಇನ್ಸ್‌ಪೆಕ್ಟರ್ ಎಚ್.ಆರ್ ನಟರಾಜ್ , ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕು ಕಚೇರಿಯ ಎಸ್ ಡಿಎ ಅನಂತ್ ಕುಮಾರ್, ಯಾದಗಿರಿ ಶಹಾಪುರ ತಾಲೂಕಿನ ಉಮಾಕಾಂತ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಅಕ್ರಮ ಸಂಪತ್ತು ಆರೋಪದ ಮೇಲೆ ದಾಳಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು