8:21 AM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ ಲೋಕಾಯುಕ್ತ ಪೊಲೀಸರು

19/03/2026, 20:07

ಕೋಲಾರ(reporterkarnataka.com): ಲಂಚ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಕಾರಿನಲ್ಲಿ ಪರಾರಿಯಾಗುತ್ತಿದ್ದ ಕೋಲಾರ ಸಹಾಯಕ ಔಷಧ ನಿಯಂತ್ರಕಿಯ ಕಾರನ್ನು ಲೋಕಾಯುಕ್ತ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಅವರನ್ನು ಬಂಧಿಸಿದ್ದಾರೆ.
ಔಷಧ ಅಂಗಡಿ ಸ್ಥಳಾಂತರಕ್ಕೆ ಪರ‌ವಾನಗಿ ನೀಡಲು ಕೋಲಾರ ಸಹಾಯಕ ಔಷಧ ನಿಯಂತ್ರಕಿ ಜೆ.ಶ್ಯಾಮಲಾ ₹35 ಸಾವಿರ ಲಂಚ ಪಡೆಯುವಾಗ ಈ ನಾಟಕೀಯ ಘಟನೆ ನಡೆದಿದೆ.ಔಷಧ ಅಂಗಡಿ ಬೇರೆಡೆಗೆ ಸ್ಥಳಾಂತರಕ್ಕೆ ಪರವಾನಗಿ ನೀಡಲು ಅಧಿಕಾರಿ ₹35 ಸಾವಿರ ಲಂಚ ಕೇಳುತ್ತಿದ್ದಾರೆ ಎಂದು ಟೇಕಲ್‌ನ ಅಂಗಡಿ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಟೇಕಲ್‌ನಲ್ಲಿ ಮಂಗಳವಾರ ಕಾರಿನಲ್ಲಿಯೇ ಅಧಿಕಾರಿ ಲಂಚದ ಹಣ ಪಡೆಯುವಾಗ ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಆಯಂಟೊನಿ ಜಾನ್‌ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ತಕ್ಷಣ ಮಹಿಳಾ ಅಧಿಕಾರಿಯು ಸಹಾಯಕ ಔಷಧ ನಿಯಂತ್ರಕರ ಕಚೇರಿಯ ‌’ಡಿ’ ಗ್ರೂಪ್ ನಿವೃತ್ತ ನೌಕರ ಶ್ರೀನಿವಾಸ್‌ ಮತ್ತು ಚಾಲಕನೊಂದಿಗೆ ಕಾರಿನಲ್ಲಿ ಪರಾರಿಯಾದರು.

ಬಂಗಾರಪೇಟೆ ಕಡೆ ವೇಗವಾಗಿ ಹೊರಟ ಕಾರನ್ನು ಲೋಕಾಯುಕ್ತ ಪೊಲೀಸರು ಬೆನ್ನಟ್ಟಿದ್ದಾರೆ. ಸುಮಾರು 15 ಕಿ.ಮೀ. ದೂರ ಬೆನ್ನತ್ತಿದ ನಂತರ ಆರೋಪಿಗಳ ಕಾರಿಗೆ ತಮ್ಮ ಕಾರನ್ನು ಅಡ್ಡ ನಿಲ್ಲಿಸಿ ಹಿಡಿದಿದ್ದಾರೆ.

ಜೆ.ಶ್ಯಾಮಲಾ, ಶ್ರೀನಿವಾಸ್ ಮತ್ತು ಶ್ಯಾಮಲಾ ಅವರ ಕಾರಿನ ಚಾಲಕ ಮಹಾಂತೇಶ್‌ ಅವರನ್ನು ಮಂಗಳವಾರ ರಾತ್ರಿ ಬಂಧಿಸಿರುವುದಾಗಿ ಆಯಂಟೋನಿ ಜಾನ್‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು