7:21 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ: ಕಳಸದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

19/01/2024, 15:39

ಕಳಸ(reporterkarnataka.com): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಅವರು ಇಂದು ಕಳಸದಲ್ಲಿರುವ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಶಾಸಕರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾಗಿ ಚರ್ಚೆ ನಡೆಸಿದರು.


ಉಡುಪಿಯಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದಾಗ ಮಾರ್ಗದ ಮಧ್ಯೆ ಕಳಸದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಚಿವರಿಗೆ ಅದ್ದೂರಿ ಸ್ವಾಗತ ನೀಡಿದರು. ಬಳಿಕ ಮಾತನಾಡಿದ ಸಚಿವರು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ಆಯಿತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗುವಂತೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯೋಣ ಎಂದು ಕರೆ ನೀಡಿದರು.
ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಕಾರ್ಯಕರ್ತರು ಸನ್ಮಾನಿಸಿದರು. ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಯಾಣಿಕ, ಸ್ಥಳೀಯ ಮುಖಂಡರಾದ ವೀರೇಂದ್ರ, ಶಂಸುದ್ದೀನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು