ಇತ್ತೀಚಿನ ಸುದ್ದಿ
ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ
26/06/2024, 13:32
ನವದೆಹಲಿ(reporterkarnataka.com): ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯ್ಕೆಗೊಂಡಿದ್ದಾರೆ.
ಸಂಸದ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಕ್ಕೆ ಈ ವಿಷಯ ತಿಳಿಸಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರನ್ನಾಗಿ ಮಾಡುವುದಾಗಿ ತಿಳಿಸಿದ್ದಾರೆ ಎಂದು ವೇಣುಗೋಪಾಲ್ ಹೇಳಿದರು.
ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಿದ ಗಾಂಧಿ ಕುಟುಂಬದ ಮೂರನೇ ಸದಸ್ಯ ರಾಹುಲ್ ಗಾಂಧಿ. ಈ ಮುನ್ನ ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಪ್ರತಿಪಕ್ಷದ ನಾಯಕ ಸ್ಥಾನವನ್ನು ಅಲಂಕರಿಸಿದ್ದರು.
ಜೂನ್ 9 ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಣಯವನ್ನು ಅಂಗೀಕರಿಸಿತು.